ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಬೈಪಾಸ್ ಬಳಿ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ರಾಜೇಶ್ ಎಂಬವರಿಗೆ ಸೇರಿದ ವಿಷ್ಣು ಹೆಸರಿನ ಬೇಕರಿಯಲ್ಲಿ ಗುರುವಾರ ರಾತ್ರಿ ಬೆಂಕಿ ಅವಘಡ ನಡೆದು ಸಾಮಾಗ್ರಿಗಳು ಸುಟ್ಟು ಕರಕಲಾಗಿದೆ. ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಈ ಬೆಂಕಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಗುರುವಾರ ರಾತ್ರಿ ರಾಜೇಶ್ ಅವರು ಅಂಗಡಿ ಬಂದ್ ಮಾಡಿ ಮನೆಗೆ ತೆರಳಿದ ಬಳಿಕ ಮಧ್ಯರಾತ್ರಿ ವೇಳೆ ಈ ಅವಘಡ ಸಂಭವಿಸಿದ್ದು, ಅಂಗಡಿಯೊಳಗೆ ಹೊಗೆಯಾಡುತ್ತಿದ್ದುದನ್ನು ಕಂಡ ಸ್ಥಳೀಯರು ಮಾಹಿತಿ ನೀಡಿದಾಗ ಬೆಂಕಿ ಅವಘಡ ತಿಳಿದು ಬಂದಿದೆ ಎನ್ನಲಾಗಿದೆ. ಘಟನೆಯಿಂದ ಸುಮಾರು 10 ಲಕ್ಷಕ್ಕೂ ಹೆಚ್ಚಿನ ನಷ್ಟ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment