ಬೆಂಗಳೂರು (ಕರಾವಳಿ ಟೈಮ್ಸ್) : ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಗಲ್ಲಿಗಳಲ್ಲಿ ಗಣಪತಿ ಪ್ರತಿಷ್ಠಾಪಿಸದಂತೆ ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಮಾರ್ಗಸೂಚಿಯು ಸರಳವಾಗಿ ಸೌತಿ ಆಚರಣೆ ಮತ್ತು ಗಣೇಶ ಮೂರ್ತಿಯ ವಿಸರ್ಜನೆ ಬಗ್ಗೆ ಕೆಲವೊಂದು ನಿರ್ಬಂಧಗಳನ್ನು ಹೇರಿದೆ.
ಗಣೇಶ ಚತುರ್ಥಿಯನ್ನು ಸರಳವಾಗಿ ದೇವಸ್ಥಾನಗಳ ಓಲಗೆ ಇಲ್ಲವೆ ಮನೆಗಳಲ್ಲೇ ಆಚರಿಸುವುದು, ಗಣೇಶೋತ್ಸವದಂದು ಸಾರ್ವಜನಿಕ ಸ್ಥಳಗಳಾದ ರಸ್ತೆ, ಗಲ್ಲಿ, ಓಣಿ, ಮೈದಾನ ಇತ್ಯಾದಿಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ., ಯಾವುದೇ ಕಾರಣಕ್ಕೂ ಸಾರ್ವಜನಿಕ ನೀರಿನ ಮೂಲಗಳಾದ ನದಿ, ಕೆರೆ, ಕೊಳ, ಬಾವಿಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ., ಗಣೇಶ ಹಬ್ಬದಂದು ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕೂ, ಯಾವುದೇ ಸಂದರ್ಭದಲ್ಲಿಯೂ ಮೆರವಣಿಗೆ ಮಾಡುವಂತಿಲ್ಲ. ಇವುಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ., ಮನೆಗಳಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಮನೆಗಳ ಆವರಣದಲ್ಲಿಯೇ ವಿಸರ್ಜಿಸಬೇಕು., ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ಪ್ರತಿನಿತ್ಯ ಸ್ಯಾನಿಟೈಸೇಷನ್ ಮಾಡುವುದು, ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಬೇಕು. ಭಕ್ತರು ಕನಿಷ್ಠ 6 ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಕಟ್ಟುನಿಟ್ಟಾಗಿ ಪಾಲನೆ ಮಾಡುವ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶಕರನ್ನು ಹಾಗೂ ರಾಜ್ಯ ಸರಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೆ ಕಟ್ಟುನಿಟ್ಟಾಗಿ ಪಾಲಿಸುವುದು, ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೆÇಲೀಸ್, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ದಳ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಿದ ಸೂಚನೆ, ಮಾರ್ಗಸೂಚಿಗಳನ್ನು ಕೂಡಾ ಕಡ್ಡಾಯವಾಗಿ ಪಾಲಿಸುವುದು, ಗಣೇಶೋತ್ಸವ ಆಚರಣೆ ವೇಳೆ ಸಂದರ್ಭಕ್ಕನುಗುಣವಾಗಿ ಸರಕಾರ, ಜಿಲ್ಲಾಡಳಿತ, ಪೆÇಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ, ಪ್ರಾಧಿಕಾರಗಳಿಂದ ಹೊರಡಿಸಲಾದ ಎಲ್ಲ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು, ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ಅಡಿ ಶಿಸ್ತು, ಕಾನೂನು ಕ್ರಮ ಹಾಗೂ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಸರಕಾರದ ಮಾರ್ಗಸೂಚಿ ತಿಳಿಸಿದೆ.
0 comments:
Post a Comment