ರೆಡ್ ಅಲರ್ಟ್ ಡಿಕ್ಲೇರ್ಡ್
ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದ ಕರಾವಳಿ ಭಾಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ (ಆ. 17) ಆಗಸ್ಟ್ 21 ರವರೆಗೆ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಆ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಉತ್ತರ ಒಳ ನಾಡುಗಳಲ್ಲಿ ಚದುರಿದಂತೆ ಇಂದು ಮತ್ತು ನಾಳೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
0 comments:
Post a Comment