ನವದೆಹಲಿ (ಕರಾವಳಿ ಟೈಮ್ಸ್) : ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಹೇರಲದ ಲಾಕ್‍ಡೌನ್ ಹಿನ್ನಲೆಯಲ್ಲಿ ಕಳೆದ ಐದು ತಿಂಗಳಿಂದ ಸ್ಥಗಿತಗೊಳಿಸಲಾಗಿದ್ದ ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ಇದೀಗ ಮತ್ತೆ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಇಂದು ಅಧಿಸೂಚನೆ ಹೊರಡಿಸಿದೆ. ಈ ನಿರ್ಬಂಧವು ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಇದೇ ವೇಳೆ ಸ್ಪಷ್ಟಪಡಿಸಿದೆ.
ಮಾರ್ಚ್ 25ರಂದು ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಿದ ಬಳಿಕ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು. ಮೇ 25 ರಿಂದ ದೇಶಿಯ ವಿಮಾನ ಹಾರಾಟ ಆರಂಭಿಸಲಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರೆಸಲಾಗಿದೆ. ವಂದೇ ಭಾರತ್ ಮಿಷನ್ ಅಡಿ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲಾಗುತ್ತಿದೆ. ಈ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಲಾಗಿದೆ.
0 comments:
Post a Comment