ಡಿಕ್ಕಿಯ ತೀವ್ರತೆಗೆ ಎರಡೂ ಬೈಕುಗಳು ಸುಟ್ಟು ಭಸ್ಮ
ಚಿಕ್ಕಮಗಳೂರು (ಕರಾವಳಿ ಟೈಮ್ಸ್) : ಜಿಲ್ಲೆಯ ಕಡೂರು ತಾಲೂಕಿನ ಗೆದ್ದಲಹಳ್ಳಿ ಎಂಬಲ್ಲಿನ ರಾಷ್‍ಟರೀಯ ಹೆದ್ದಾರಿಯಲ್ಲಿ ನಡೆದ ಬೈಕ್‍ಗಳ ಮುಖಾಮುಖಿ ಅಪಘಾತದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಘಟನೆಯ ತೀವ್ರತೆಗೆ ಎರಡು ಬೈಕ್‍ಗಳು ಸುಟ್ಟು ಕರಕಲಾಗಿವೆ.
ಶಿವಮೊಗ್ಗ ಕಡೆಯಿಂದ ಹಾಸನ ಕಡೆ ಸಂಚರಿಸುತ್ತಿದ್ದ ಯೂನಿಕಾರ್ನ್ ಬೈಕ್ ಹಾಗೂ ಬೆಂಗಳೂರು ಕಡೆಯಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಪಲ್ಸರ್ ಬೈಕ್ ನಡುವೆ ಈ ಮುಖಾಮುಖಿ ಅಪಘಾತ ಸಂಭವಿಸಿದ್ದು, ಮಂಜುನಾಥ್ (35) ಮೃತ ಯೂನಿಕಾರ್ನ್ ಬೈಕ್ ಸವಾರ ಎಂದು ಹೆಸರಿಸಲಾಗಿದೆ.
ಡಿಕ್ಕಿಯ ತೀವ್ರತೆಗೆ ಮಂಜುನಾಥ್ ಸುಮಾರು 20 ಅಡಿ ದೂರಕ್ಕೆ ಎಸೆಯಲ್ಪಟ್ಟಿದ್ದು, ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಪಲ್ಸರ್ ಬೈಕಿನಲ್ಲಿದ್ದ ಸಂಜಯ್ ಎಂಬಾತ ಗಂಭೀರ ಗಾಯಗೊಂಡಿದ್ದು, ಚಿಂತಾಜನ ಸ್ಥಿತಿಯಲ್ಲಿ ಆಸ್ಪತೆಗೆ ದಾಖಲಾದರೆ, ಇನ್ನೋರ್ವ ಸವಾರ ಗೌತಮ್ ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆ ಸೇರಿದ್ದಾನೆ.
ಎರಡು ಬೈಕುಗಳ ಮಧ್ಯೆ ನಡೆದ ಡಿಕ್ಕಿಯ ತೀವ್ರತೆಗೆ ಎರಡೂ ಬೈಕ್‍ಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಸುಟ್ಟು ಕರಕಲಾಗಿದೆ. ಬೈಕ್ ಸವಾರರ ಬಳಿ ಇದ್ದ ಸ್ಯಾನಿಟೈಸರ್ ಕಾರಣದಿಂದ ಈ ಬೆಂಕಿ ಅವಘಡ ಸಂಭವಿಸಿದೆ ಎಂದು ಅಭಿಪ್ರಾಯಪಡಲಾಗಿದೆ. ಘಟನಾ ಸ್ಥಳಕ್ಕೆ ಕಡೂರು ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 comments:
Post a Comment