ಬೆಂಗಳೂರು (ಕರಾವಳಿ ಟೈಮ್ಸ್) : ಕಾನೂನು ಪದವಿಯ ಪ್ರಥಮ ವರ್ಷದಿಂದ ನಾಲ್ಕನೇ ವರ್ಷದ ಪದವಿವರೆಗಿನ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಬುಧವಾರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಧುಸ್ವಾಮಿ, ಕಾನೂನು ಪದವಿ ಅಂತಿಮ ವರ್ಷದ ಪರೀಕ್ಷೆಗಳು ಅಕ್ಟೋಬರ್‍ನಲ್ಲಿ ಅನ್‍ಲೈನ್ ಮೂಲಕ ನಡೆಸಲು ತೀರ್ಮಾನಿಸಲಾಗಿದೆ. ಮುಂದೂಡುವ ಪರೀಕ್ಷೆಗಳಲ್ಲಿ ಪಾಸ್ ಆದರೆ ಮಾತ್ರ ಅದರ ಮುಂದಿನ ಸೆಮಿಸ್ಟರ್‍ಗೆ ತೇರ್ಗಡೆ ಹೊಂದಲು ಅವಕಾಶ ನೀಡಲಾಗುವುದು ಎಂದರು.
ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು, ರಾಜಕೀಯ ನಾಯಕರು ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ ಈ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದ ಮಾಧುಸ್ವಾಮಿ ಲಾಕ್‍ಡೌನ್ ಮಾರ್ಚ್‍ನಲ್ಲಿ ಆರಂಭವಾದ ಕಾರಣ ಮೂರು ತಿಂಗಳು ತರಗತಿಗಳು ನಡೆದಿಲ್ಲ. ಹಾಗಾಗಿ ಪರೀಕ್ಷೆಗಳನ್ನು ಮುಂದೂಡುತ್ತಿದ್ದೇವೆ ಎಂದರು.
ಸೆಪ್ಟೆಂಬರ್ ತಿಂಗಳಲ್ಲಿ ತರಗತಿಗಳು ಆರಂಭವಾಗುತ್ತವೆ. ಅನ್‍ಲೈನ್‍ನಲ್ಲಿಯೂ ತರಗತಿಗಳು ಶುರುವಾಗುತ್ತಿದೆ. ಈಗಿರುವ ಸೆಮಿಸ್ಟರ್‍ನಿಂದ ಮುಂದಿನ ಸೆಮಿಸ್ಟರ್‍ಗೆ ತೇರ್ಗಡೆ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.
0 comments:
Post a Comment