ವಿಟ್ಲ (ಕರಾವಳಿ ಟೈಮ್ಸ್) : ಬಿಜೆಪಿ ಮಾಣಿ ಮಹಾಶಕ್ತಿ ಕೇಂದ್ರ ಹಾಗೂ ಬಿಜೆಪಿ ಯುವ ಮೋಚಾ ವತಿಯಿಂದ ಆಯುಷ್ಮಾನ್ ಭಾರತ್ ಯೋಜನೆಗೆ ಉಚಿತ ನೋಂದಾವಣೆ ಕಾರ್ಯಕ್ರಮ ವೀರಕಂಭ ಶ್ರೀ ಶಾರದ ಭಜನಾ ಮಂದಿರದಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಸಂದೇಶ ಕುಮಾರ್ ಶೆಟ್ಟಿ ಅರೆಬೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ಮಾಣಿ ಶಕ್ತಿ ಕೇಂದ್ರದ ಅಧ್ಯಕ್ಷ ರೊನಾಲ್ಡ್ ಡಿ’ಸೋಜ ಅಧ್ಯಕ್ಷತೆ ವಹಿಸಿದ್ದರು.
ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್, ಬುಡಾ ಅಧ್ಯಕ್ಷ ಬಿ ದೇವದಾಸ್ ಶೆಟ್ಟಿ, ತಾ.ಪಂ. ಸದಸ್ಯೆ ಗೀತಾ ಚಂದ್ರಶೇಖರ್, ನೆರಳಕಟ್ಟೆ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ್ ಚೌಟ, ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಸೀಮಾ ಮಾಧವ, ವೀರಕಂಬ ಗ್ರಾ.ಪಂ. ನಿಕಟಪೂರ್ವ ಸದ¸ಸ್ಯೆ ಜಯಂತಿ ಜನಾರ್ಧನ್, ಶ್ರೀ ಶಾರದಾ ಭಜನಾ ಮಂದಿರ ಸಂಚಾಲಕ ನಾರಾಯಣ ಭಟ್ ಬೆತ್ತ ಸರವು, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸನತ್ ಕುಮಾರ್ ರೈ, ಉದ್ಯಮಿ ಸಂದೀಪ್ ಕುಮಾರ್ ಶೆಟ್ಟಿ ಅರೆಬೆಟ್ಟು, ಬಿಜೆಪಿ ಹಿಂದುಳಿದ ವರ್ಗದ ಸದಸ್ಯ ವೀರಪ್ಪ ಮೂಲ್ಯ, ವೀರಕಂಭ ಗ್ರಾ.ಪಂ. ಬೂತ್ ಸಮಿತಿ ಅಧ್ಯಕ್ಷರುಗಳಾದ ದಿನೇಶ್ ಪೂಜಾರಿ, ಸದಾಶಿವ, ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಬೆತ್ತ ಸರವು, ರಮೇಶ್ ಗೌಡ ಮೈರ, ಬಿಜೆಪಿ ಎಸ್.ಟಿ. ಮೋರ್ಚಾ ಸದಸ್ಯ ಕೇಶವ ನಾಯ್ಕ ಕೆಮ್ಮಟೆ, ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ ಬಾಯಿಲ, ಮಜಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ ಮೊದಲಾದವರು ಭಾಗವಹಿಸಿದ್ದರು. ಸುಮಾರು 673 ಮಂದಿ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಂಡರು.
0 comments:
Post a Comment