ಹೊಸ ಶಿಕ್ಷಣ ನೀತಿ : ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರವನ್ನೂ ನೀಡಲು ಪ್ರಸ್ತಾಪ - Karavali Times ಹೊಸ ಶಿಕ್ಷಣ ನೀತಿ : ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರವನ್ನೂ ನೀಡಲು ಪ್ರಸ್ತಾಪ - Karavali Times

728x90

2 August 2020

ಹೊಸ ಶಿಕ್ಷಣ ನೀತಿ : ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರವನ್ನೂ ನೀಡಲು ಪ್ರಸ್ತಾಪ



ನವದೆಹಲಿ (ಕರಾವಳಿ ಟೈಮ್ಸ್) :
ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರವನ್ನು ನೀಡಬೇಕೆಂಬ ಮಹತ್ವದ ಅಂಶ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ) ಯಲ್ಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ-2020ಗೆ ಕೇಂದ್ರ ಸರಕಾರ ಬುಧವಾರ ಒಪ್ಪಿಗೆ ಸೂಚಿಸಿದ್ದು, ಇದರಲ್ಲಿ ಎಲಿಮೆಂಟರಿ ತರಗತಿವರೆಗೆ ಓದುತ್ತಿರುವ ಮಕ್ಕಳಿಗೆ ಬೆಳಗ್ಗಿನ ಉಪಹಾರದ ಕುರಿತು ಪ್ರಸ್ತಾಪಿಸಲಾಗಿದೆ. ಉಪಹಾರ, ಊಟದ ಜೊತೆಗೆ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಅವರ ಮಾನಸಿಕ ಆರೋಗ್ಯ ಕಾಪಾಡಲು ಶಾಲೆಯಲ್ಲಿ ನುರಿತ ಸಾಮಾಜಿಕ ಕಾರ್ಯಕರ್ತರು ಹಾಗೂ ಕೌನ್ಸಿಲರ್‍ಗಳನ್ನು ನೇಮಿಸಬೇಕು ಎಂದು ತಿಳಿಸಲಾಗಿದೆ.

    ಉಪಹಾರ ಸೇವಿಸಿದ ಬಳಿಕ ಬೆಳಗಿನ ಅವಧಿಯಲ್ಲಿ ಮಕ್ಕಳ ಅಧ್ಯಯನ ಬಹಳ ಚೆನ್ನಾಗಿ ನಡೆಯುತ್ತದೆ ಎಂದು ಸಂಶೋಧನಾ ವರದಿಗಳು ತಿಳಿಸಿದ ಹಿನ್ನೆಲೆಯಲ್ಲಿ ಈ ಅಂಶವನ್ನು ಎನ್‍ಇಪಿಯಲ್ಲಿ ಸೇರಿಸಲಾಗಿದೆ. ವಿದ್ಯಾರ್ಥಿಗಳ ಪೆÇೀಷಣೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಸಮುದಾಯವನ್ನು ಶಾಲಾ ವ್ಯವಸ್ಥೆಯಲ್ಲಿ ತೊಡಗಿಸಿಕೊಳ್ಳಬೇಕು. ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರವನ್ನೂ ನೀಡಬೇಕು ಎಂದು ಶಿಫಾರಸು ಮಾಡಿದೆ.

    ಬೆಳಿಗ್ಗೆ ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಉಪಹಾರ ನೀಡುವುದರಿಂದ ಅಧ್ಯಯನಕ್ಕೆ ಹೆಚ್ಚು ಉಪಯುಕ್ತವಾಗುತ್ತದೆ. ಹೀಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರವನ್ನೂ ನೀಡಬೇಕು ಎಂದು ಹೇಳಿದೆ. ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ ಬಳಿಕ ಸರಕಾರ ಬಿಡುಗಡೆ ಮಾಡಿದ ಹೊಸ ಶಿಕ್ಷಣ ನೀತಿಯಲ್ಲಿ ಮಕ್ಕಳು ಅಪೌಷ್ಠಿಕತೆಯಿಂದ ಹಾಗೂ ಅನಾರೋಗ್ಯದಿಂದ ಬಳಲುವುದರಿಂದ ಉತ್ತಮ ಕಲಿಕೆ ಸಾಧ್ಯವಿಲ್ಲ. ಹೀಗಾಗಿ ಮಕ್ಕಳಿಗೆ ಪೆÇೀಷಣೆ ಮತ್ತು ಮಾನಸಿಕ ಆರೋಗ್ಯವೂ ಅಗತ್ಯ. ಶಿಕ್ಷಿತ ಸಾಮಾಜಿಕ ಕಾರ್ಯಕರ್ತರು, ಸಲಹೆಗಾರರು ಹಾಗೂ ಶಾಲಾ ವ್ಯವಸ್ಥೆಯಲ್ಲಿ ಸಮುದಾಯದ ಒಳಗೊಳ್ಳುವಿಕೆ ಅಗತ್ಯ ಎಂದು ಪ್ರಸ್ತಾಪಿಸಲಾಗಿದೆ.

    ಮಧ್ಯಾಹ್ನದ ಬಿಸಿಯೂಟ ಮಾಡಲು ಸಾಧ್ಯವಿಲ್ಲದ ಕಡೆಯಲ್ಲಿ ಮಕ್ಕಳಿಗೆ ಅಲ್ಲಿಯೇ ಪ್ರಕೃತಿಯಲ್ಲಿ ಬೆಳೆದ ಹಣ್ಣುಗಳ ಜೊತೆಗೆ ಕಡಲೆಬೀಜ ಮತ್ತು ನೆಲಗಡಲೆಯನ್ನು ಬೇಯಿಸಿ ಬೆಲ್ಲದ ಜೊತೆ ಮಕ್ಕಳಿಗೆ ನೀಡಬಹುದು, ಇದರಿಂದ ಪೌಷ್ಟಿಕಾಂಶ ಸಿಗುತ್ತದೆ. ಮಕ್ಕಳಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿ ಆರೋಗ್ಯ ಕಾರ್ಡು ನೀಡಬೇಕು, ಮಕ್ಕಳ ಆರೋಗ್ಯವನ್ನು ವೃದ್ಧಿಸುವ ಕೆಲಸಗಳು ಶಾಲೆಯಲ್ಲಿ ಆಗಬೇಕು ಎಂದು ಶಿಕ್ಷಣ ನೀತಿ ಹೇಳುತ್ತದೆ.

    5 ವರ್ಷದೊಳಗಿನ ಮಗು ಸಿದ್ದತಾ ತರಗತಿ ಅಥವಾ ಬಾಲವಟಿಕಕ್ಕೆ ಹೋಗಬೇಕು, ಮಗುವಿನ ಸರ್ವತೋಮುಖ ಬೆಳವಣಿಗೆಯಾಗುವಂತಹ ಆಟದ ಮೂಲಕ ಪಾಠ ಕಲಿಕೆ ಈ ಹಂತದಲ್ಲಿ ನಡೆಯಲಿದೆ. ಪ್ರಾಥಮಿಕ ಶಾಲೆಗಳಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಸಹ ಮಧ್ಯಾಹ್ನದ ಬಿಸಿಯೂಟ ನೀಡಬೇಕು. ಅಂಗನವಾಡಿಯಲ್ಲಿ ಈಗ ಮಾಡುವ ಆರೋಗ್ಯ ತಪಾಸಣೆ, ಮಕ್ಕಳ ಬೆಳವಣಿಗೆಯ ಗಮನವನ್ನು ಬಾಲವಟಿಕ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಕೂಡ ಮಾಡಬೇಕಾಗುತ್ತದೆ ಎಂದು ಶಿಕ್ಷಣ ನೀತಿ ತಿಳಿಸುತ್ತದೆ.

    ಸದ್ಯ ಮಧ್ಯಾಹ್ನದ ಬಿಸಿಯೂಟ ಎಲ್ಲಾ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 8ನೇ ತರಗತಿವರೆಗೆ ಮಕ್ಕಳಿಗೆ ನೀಡಲಾಗುತ್ತದೆ. 11.59 ಕೋಟಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸದ್ಯ ಇದರ ಲಾಭ ಪಡೆಯುತ್ತಿದ್ದು 26 ಲಕ್ಷ ಅಡುಗೆ ಕೆಲಸದವರು ಮತ್ತು ಸಹಾಯಕರು ಇದರಿಂದ ಉದ್ಯೋಗ ಪಡೆದುಕೊಂಡಿದ್ದಾರೆ.

    1986ರಲ್ಲಿ ರಚಿಸಲ್ಪಟ್ಟಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಲಿಸಿ ನೂತನ ಶಿಕ್ಷಣ ನೀತಿ ಜಾರಿಗೆ ಬರುತ್ತಿದ್ದು, ಭಾರತವನ್ನು ಜಾಗತಿಕ ಮಟ್ಟದಲ್ಲಿ ಶಕ್ತಿಶಾಲಿ ದೇಶವನ್ನಾಗಿ ರೂಪಿಸಲು ಶಾಲಾ ಮತ್ತು ಉನ್ನತ ಶಿಕ್ಷಣ ಹಂತದಲ್ಲಿ ಬದಲಾವಣೆ ತರಲು ಕೇಂದ್ರ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಜಾರಿಗೆ ತರುತ್ತಿದೆ.





  • Blogger Comments
  • Facebook Comments

0 comments:

Post a Comment

Item Reviewed: ಹೊಸ ಶಿಕ್ಷಣ ನೀತಿ : ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರವನ್ನೂ ನೀಡಲು ಪ್ರಸ್ತಾಪ Rating: 5 Reviewed By: karavali Times
Scroll to Top