ಬಂಟ್ವಾಳ (ಕರಾವಳಿ ಟೈಮ್ಸ್) : ಬಿ.ಸಿ.ರೋಡಿನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದೇಶದ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಮಾಜಿ ಸಚಿವ ಬಿ ರಮಾನಾಥ ರೈ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಜಿ.ಪಂ. ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಂಜುಳಾ ಮಾಧವ ಮಾವೆ, ತಾ.ಪಂ. ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪುರಸಭಾ ಸದಸ್ಯರುಗಳಾದ ಜನಾರ್ದನ ಚಂಡ್ತಿಮಾರ್, ಲುಕ್ಮಾನ್ ಬಿ.ಸಿ.ರೋಡು, ಗಂಗಾಧರ್, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪ್ರಮುಖರಾದ ಮಾಧವ ಮಾವೆ, ಇಬ್ರಾಹಿಂ ನವಾಝ್ ಬಡಕಬೈಲ್, ಚಂದ್ರಶೇಖರ್ ಪೂಜಾರಿ ಬಾಳ್ತಿಲ, ವಿಶ್ವಜಿತ್ ಶೆಟ್ಟಿ, ಸುರೇಶ್ ಜೋರ, ಮಹಮ್ಮದ್ ನಂದರಬೆಟ್ಟು, ಪವನ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment