ಮಂಗಳೂರು (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಮಂಗಳೂರು ನಗರದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಶೀಘ್ರದಲ್ಲೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಕೊರೊನಾ ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಅತ್ಯಂತ ಪ್ರಭಾವಶಾಲಿಯಾಗಿರುವುದು ಹಲವೆಡೆ ಸಾಕಾರಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಫ್ಲಾಸ್ಮಾ ಥೆರಪಿಯನ್ನು ಬಳಸಿ ವೈದ್ಯಕೀಯ ಸಂಶೋಧನೆ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಪ್ಲಾಸ್ಮಾ ಕೇಂದ್ರ ಸ್ಥಾಪಿಸುವ ಕುರಿತು ಸಚಿವರೊಂದಿಗೆ ಚರ್ಚಿಸಿ, ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದಿದ್ದಾರೆ.
ಕೋವಿಡ್ ಸೋಂಕಿತರು ಗುಣಮುಖರಾದ ಮೇಲೆ ಅವರ ರಕ್ತದ ದ್ರವ ಭಾಗವನ್ನು ಶೇಖರಿಸಿ ಚಿಕಿತ್ಸೆ ನೀಡುವ ವಿಧಾನವನ್ನು ಕರ್ನಾಟಕದಲ್ಲಿ ಈಗಾಗಲೇ ಪ್ರಾರಂಭಿಸಲಾಗಿದೆ. ಸೋಂಕಿತ ವ್ಯಕ್ತಿಯು ಚೇತರಿಸಿಕೊಳ್ಳುವ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ದೇಹದಿಂದ ಪ್ಲಾಸ್ಮಾ ಸಂಗ್ರಹಿಸಿ ರೋಗಿಗಳಿಗೆ ಚಿಕಿತ್ಸೆ ನೀಡುವ ಪದ್ಧತಿಯನ್ನು ಮಂಗಳೂರಿನಲ್ಲಿ ಅಳವಡಿಸಬೇಕು. ಒಬ್ಬ ವ್ಯಕ್ತಿಯಿಂದ ಸಂಗ್ರಹಿಸುವ ಪ್ಲಾಸ್ಮಾದಿಂದ ಗರಿಷ್ಠ 5 ಜನರಿಗೆ ಚಿಕಿತ್ಸೆ ನೀಡಬಹುದು ಎನ್ನುವುದನ್ನು ಈಗಾಗಲೇ ಅಧ್ಯಾಯನದ ಮೂಲಕ ಕಂಡುಕೊಳ್ಳಲಾಗಿದೆ. ಹಾಗಾಗಿ ಸೋಂಕಿತರನ್ನು ಗುಣಪಡಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸಬಹುದು. ಈ ವಿಚಾರವಾಗಿ ಜಿಲ್ಲಾಧಿಕಾರಿ ಹಾಗೂ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಚಿವರ ಗಮನಕ್ಕೂ ತರಲಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.
0 comments:
Post a Comment