ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೋನಾ ಪಾಸಿಟಿವ್ - Karavali Times ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೋನಾ ಪಾಸಿಟಿವ್ - Karavali Times

728x90

9 August 2020

ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೋನಾ ಪಾಸಿಟಿವ್

 


ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ವರದಿ ಬಂದಿದೆ. ದೃಢಪಟ್ಟಿದೆ. ಭಾನುವಾರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ ಎಂದು ಸ್ವತಃ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. 

ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೊರೊನ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವ ಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. 






  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೋನಾ ಪಾಸಿಟಿವ್ Rating: 5 Reviewed By: karavali Times
Scroll to Top