6 ಮಂದಿ ವಿದ್ಯಾರ್ಥಿಗಳಿಗೆ 625 ಅಂಕಗಳು
ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಧುಗಿರಿ ಜಿಲ್ಲೆಗಳಿಗೆ ಮೊದಲ ಮೂರು ಸ್ಥಾನ, ಯಾದಗಿರಿಗೆ ಕೊನೆಯ ಸ್ಥಾನ
ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಸುದ್ದಿಗೋಷ್ಠಿ ನಡೆಸಿ ಸೋಮವಾರ ಮಧ್ಯಾಹ್ನ ಫಲಿತಾಂಶ ಬಿಡುಗಡೆಗೊಳಿಸಿದರು.
ಪರೀಕ್ಷೆ ಬರೆದ ಒಟ್ಟು 8,11,050 ವಿದ್ಯಾರ್ಥಿಗಳ ಪೈಕಿ 5,82,316 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.71.80 ಫಲಿತಾಂಶ ದಾಖಲಾಗಿದೆ. ಕಳೆದ ವರ್ಷ ಶೇ.73.70 ಫಲಿತಾಂಶ ದಾಖಲಾಗಿತ್ತು.
ಈ ಬಾರಿ 2,24,734 ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ.
ಎಂದಿನಂತೆ ಬಾಲಕಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ. ಶೇ. 77.74 ಬಾಲಕಿಯರು ತೇರ್ಗಡೆಯಾಗಿದ್ದರೆ, ಶೇ. 66.41 ಬಾಲಕರು ತೇರ್ಗಡೆಯಾಗಿದ್ದಾರೆ. 223 ಮೌಲ್ಯಮಾಪನ ಕೇಂದ್ರದಲ್ಲಿ 52,219 ಮೌಲ್ಯಮಾಪಕರು ಮೌಲ್ಯಮಾಪನ ಮಾಡಿದ್ದಾರೆ.
19,086 ಮಂದಿ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯದಿದ್ದರೆ, 8,067 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ. ಕಳೆದ ಬಾರಿ ಇಬ್ಬರು ವಿದ್ಯಾರ್ಥಿಗಳು 625 ಅಂಕವನ್ನು ಪಡೆದಿದ್ದರೆ ಈ ಬಾರಿ 6 ಮಂದಿ ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ.
ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಧುಗಿರಿ ಅನುಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದಿದ್ದರೆ ಯಾದಗಿರಿ ಕೊನೆಯ ಸ್ಥಾನವನ್ನು ಪಡೆದಿದೆ.
ವಿದ್ಯಾರ್ಥಿಗಳು www.kseeb.kar.nic.in ಮತ್ತು www.karresults.nic.in ವೆಬ್‍ಸೈಟ್‍ಗಳಲ್ಲಿ ಫಲಿತಾಂಶ ವೀಕ್ಷಿಸಬಹುದು.
0 comments:
Post a Comment