ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಆಗಸ್ಟ್ 10 ರಂದು ಸೋಮವಾರ ಪ್ರಕಟವಾಗಲಿದೆ.
ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಸುರೇಶ್ ಕುಮಾರ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಕೊರೊನಾ ಸೋಂಕು ಭೀತಿಯ ನಡುವೆಯೂ ಸರ್ಕಾರವು ಯಶಸ್ವಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿತ್ತು. 8.5 ಲಕ್ಷ ವಿದ್ಯಾರ್ಥಿಗಳಲ್ಲಿ ಸರಾಸರಿ ಶೇ.98 ರಷ್ಟು ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಮಾಸ್ಕ್ ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
0 comments:
Post a Comment