ಯುಜಿಸಿಗೆ ಮನವಿ ಮಾಡಿ ಅಂತಿಮ ದಿನಾಂಕ ವಿಸ್ತರಿಸಲು ಕೋರಿಕೊಳ್ಳಬಹುದು ಹೊರತು ಪರೀಕ್ಷೆಯನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಸುಪ್ರೀಂ
ಅಂತಿಮ ವರ್ಷದ ಪದವಿ, ಪಿಜಿ, ಡಿಪ್ಲೊಮಾ, ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪರೀಕ್ಷೆ ಅಬಾಧಿತ
ನವದೆಹಲಿ (ಕರಾವಳಿ ಟೈಮ್ಸ್) : ವಿಶ್ವವಿದ್ಯಾನಿಲಯಗಳು ಅಂತಿಮ ವರ್ಷದ ಪರೀಕ್ಷೆ ನಡೆಸದೇ ಪದವಿ ನೀಡಲು ಸಾಧ್ಯವಿಲ್ಲ ಎಂಬ ಯುಜಿಸಿ ವಾದವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವ ಮೂಲಕ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರಕಾರಗಳಿಗೆ ಸುಪ್ರೀಂ ಸೂಚಿಸಿದೆ.
ಅಂತಿಮ ವರ್ಷದ ಪದವಿ ಪರೀಕ್ಷೆಗಳ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಗಳ ಸಂಬಂಧ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ತ್ರಿಸದಸ್ಯ ಪೀಠ ಅಂತಿಮ ವರ್ಷ ಪರೀಕ್ಷೆಗಳು ಕಡ್ಡಾಯವಾಗಿದ್ದು, ಬೇಕಿದ್ದರೆ ಯುಜಿಸಿಗೆ ಮನವಿ ಮಾಡಿ ಅಂತಿಮ ದಿನಾಂಕ ವಿಸ್ತರಿಸಲು ಕೋರಿಕೊಳ್ಳಬಹುದು ಹೊರತು ಪರೀಕ್ಷೆಯನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಸೆಪ್ಟೆಂಬರ್ 30ರೊಳಗೆ ಅಂತಿಮ ವರ್ಷದಲ್ಲಿರುವ ಪದವಿ ವಿದ್ಯಾರ್ಥಿಗಳ ಪರೀಕ್ಷೆ ಪೂರ್ಣಗೊಳಿಸಲು ಯುಜಿಸಿ ಈಗಾಗಲೇ ಸೂಚನೆ ನೀಡಿದೆ. ಆದರೆ ಇದು ಸಾಧ್ಯವಾಗದಿದ್ದರೇ ಈ ಡೆಡ್‍ಲೈನ್ ಬದಲಿಸಲು ರಾಜ್ಯ ಸರಕಾರಗಳು ಮತ್ತು ವಿಶ್ವವಿದ್ಯಾಲಯಗಳು ಯುಜಿಸಿಗೆ ಮನವಿ ಮಾಡಿಕೊಳ್ಳುಬಹುದು. ಆದರೆ ಪರೀಕ್ಷೆ ನಡೆಸುವುದೇ ಬೇಡ ಎನ್ನುವುದು ಸಮಂಜಸವಲ್ಲ ಎಂದಿದೆ.
ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಖ್ಯ, ಪರೀಕ್ಷೆಗಳಿಗೆ ಉತ್ತೀರ್ಣ ಮಾಡುವ ಕ್ರಮವನ್ನು ನಾವು ವಿದ್ಯಾರ್ಥಿಗಳಲ್ಲಿ ಉತ್ತೇಜಿಸಬಾರದು. ಹೀಗಾಗಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ಕಡ್ಡಾಯ ಎಂದು ಆದೇಶ ನೀಡಿದೆ. ಹಿಂದಿನ ವಿಚಾರಣೆ ವೇಳೆ ಯುಜಿಸಿ, ಪದವಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಪರೀಕ್ಷೆಗಳು, ನಾವು ಅದನ್ನು ನಡೆಸದೇ ಪದವಿ ನೀಡಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಮಾಡುತ್ತಿದ್ದು ಮೊದಲ ಎರಡು ವರ್ಷಗಳ ವಿದ್ಯಾರ್ಥಿಗಳಿಗೆ ಆಂತರಿಕ ಮೌಲ್ಯಮಾಪನದ ಮೇಲೆ ಫಲಿತಾಂಶ ನೀಡಲಾಗುತ್ತಿದೆ ಎಂದು ತನ್ನ ನಡೆಯನ್ನು ಸಮರ್ಥಿಸಿಕೊಂಡಿತ್ತು. ಯುಜಿಸಿ ಪರೀಕ್ಷೆಗಳಿಲ್ಲದೇ ಅಂತಿಮ ವರ್ಷದ ಫಲಿತಾಂಶ ನೀಡುವ ಬಗ್ಗೆ ಸಜ್ಜುಗೊಂಡಿಲ್ಲ ಪರೀಕ್ಷೆ ನಡೆಸುವುದು ಉತ್ತಮ ಎಂದು ಯುಜಿಸಿ ವಾದವನ್ನು ಕೇಂದ್ರ ಸರಕಾರ ಪರ ವಕೀಲರು ಬೆಂಬಲಿಸಿದ್ದರು.
ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆಗಳು ನಡೆಸುವುದು ಅಪಾಯಕಾರಿ. ವಿದ್ಯಾರ್ಥಿಯ ಹಿಂದಿನ ಪರೀಕ್ಷೆಗಳು ಆಂತರಿಕ ಮೌಲ್ಯಮಾಪನ ಆಧರಿಸಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಫಲಿತಾಂಶ ನೀಡಲು ಹಲವು ರಾಜ್ಯ ಸರಕಾರಗಳು, ಪೆÇೀಷಕರ ಒಕ್ಕೂಟ ಹಾಗೂ ರಾಜಕೀಯ ಪಕ್ಷಗಳು ಅರ್ಜಿ ಸಲ್ಲಿಸಿದ್ದವು.
ಇದೀಗ ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಯುಜಿಸಿ ಹಳೆ ಆದೇಶದಂತೆ ಸೆಪ್ಟೆಂಬರ್ 30ರೊಳಗೆ ಪರೀಕ್ಷೆ ನಡೆಸಲಿದೆ. ಕೋರ್ಟ್ ತೀರ್ಪಿನಿಂದಾಗಿ ಪದವಿ, ಪಿಜಿ, ಡಿಪೆÇ್ಲಮಾ, ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
0 comments:
Post a Comment