ಬೆಂಗಳೂರು (ಕರಾವಳಿ ಟೈಮ್ಸ್) : ಮಾಜಿ ಸಚಿವ, ಚಾಮರಾಜಪೇಟೆಯ ಹಾಲಿ ಕಾಂಗ್ರೆಸ್ ಶಾಸಕ ಝಮೀರ್ ಅಹ್ಮದ್ ಖಾನ್ ಅವರಿಗೆ ಮಂಗಳವಾರ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಜಮೀರ್ ಒಳಗಾಗಿದ್ದರು. ಇಂದು ಪರೀಕ್ಷೆಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಝಮೀರ್, ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಬೇಕು ಎಂದವರು ಮನವಿ ಮಾಡಿದ್ದಾರೆ.
ಬೆಂಗಳೂರು ಗಲಭೆಯ ಬಳಿಕ ಜಮೀರ್ ಅಹ್ಮದ್ ನಗರದ ಹಲವೆಡೆ ಸುತ್ತಾಡಿದ್ದರು. ಮೌಲ್ವಿಗಳ ಜೊತೆ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಭೇಟಿ ನೀಡಿದ್ದ ಅವರು ಪೆÇಲೀಸರ ಗುಂಡೇಟಿಗೆ ಬಲಿಯಾದವರ ಮನೆಗೂ ಭೇಟಿ ನೀಡಿ ಕುಟುಂಬಸ್ಥರನ್ನು ಸಂತೈಸಿದ್ದರು.
0 comments:
Post a Comment