ಬೆಂಗಳೂರು (ಕರಾವಳಿ ಟೈಮ್ಸ್) : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿಪೂರ್ವ ಪರೀಕ್ಷಾ ಮಂಡಳಿ ಸೋಮವಾರ ಪ್ರಕಟಿಸಿದ್ದು, ಸೆಪ್ಟೆಂಬರ್ 7 ರಿಂದ 18ರವರೆಗೆ ಪರೀಕ್ಷೆ ನಡೆಯಲಿದೆ.
ಎರಡು ಅವಧಿಯಲ್ಲಿ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ಹಾಗೂ ಮಧ್ಯಾಹ್ನ 2.15 ರಿಂದ 5.30 ರವರೆಗೆ ಪರೀಕ್ಷೆ ನಡೆಯಲಿವೆ. ಸೆಪ್ಟೆಂಬರ್ 7 ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಉರ್ದು, ಸಂಸ್ಕøತ, ಮಧ್ಯಾಹ್ನ 2.15 ರಿಂದ 5.30 ರವರೆಗೆ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್‍ನೆಸ್, ಹೋಮ್ ಸೈನ್ಸ್, ಸೆ. 8 ರಂದು ಬೆಳಗ್ಗೆ ಇತಿಹಾಸ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ, ಸೆ. 9 ರಂದು ಬೆಳಗ್ಗೆ ಹಿಂದಿ, ಮಧ್ಯಾಹ್ನ ತಮಿಳು, ತೆಲುಗು, ಮಳಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್ ಪರೀಕ್ಷೆಗಳು ನಡೆಯಲಿವೆ.
ಸೆ. 10 ರಂದು ಬೆಳಗ್ಗೆ ಇಂಗ್ಲಿಷ್, ಸೆ. 11 ರಂದು ಐಚ್ಛಿಕ ಕನ್ನಡ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಭೂಗರ್ಭಶಾಸ್ತ್ರ, ಸೆ. 12 ರಂದು ಬೆಳಗ್ಗೆ ಅರ್ಥಶಾಸ್ತ್ರ, ಭೌತಶಾಸ್ತ್ರ, ಸೆ. 14 ರಂದು ಬೆಳಗ್ಗೆ ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ರಸಾಯನ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಸೆ. 15 ರಂದು ಬೆಳಗ್ಗೆ ಕನ್ನಡ, ಸೆ. 16 ರಂದು ಬೆಳಗ್ಗೆ ರಾಜ್ಯಶಾಸ್ತ್ರ, ಬೇಸಿಕ್ ಮ್ಯಾಥ್ಸ್, ಸೆ. 17 ರಂದು ಬೆಳಗ್ಗೆ ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಗಣಿತ, ಸೆ. 18 ರಂದು ಬೆಳಗ್ಗೆ ಭೂಗೋಳಶಾಸ್ತ್ರ ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿ ಪ್ರಕಟಣೆ ತಿಳಿಸಿದೆ.
0 comments:
Post a Comment