ಬಂಟ್ವಾಳ (ಕರಾವಳಿ ಟೈಮ್ಸ್) : ಪುದು ಗ್ರಾಮದ ಸುಜೀರ್ ಸರಕಾರಿ ಪ್ರೌಢಶಾಲೆಯಲ್ಲಿ ದೇಶದ 74ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಜಿ.ಪಂ. ಮಾಜಿ ಸದಸ್ಯ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಉಮರ್ ಫಾರೂಕ್ ಫರಂಗಿಪೇಟೆ ಧ್ವಜಾರೋಹಣಗೈದರು.
ಈ ಸಂದರ್ಭ ಮಾತನಾಡಿದ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಹೋರಾಟದ ನೆನಪು ಕೇವಲ ಒಂದು ದಿನಕ್ಕೆ ಸೀಮಿತಗೊಳ್ಳದೆ, ಅದರ ನೆನಪು ಸದಾ ನಾವು ಮಾಡಿಕೊಳ್ಳಬೇಕಾಗಿದೆ. ಅವರ ಆದರ್ಶಗಳು, ವಿಚಾರ ಧಾರೆಗಳನ್ನು ಅಳವಡಿಸಿಕೊಂಡು ಸಂಪತ್ಬರಿತ ರಾಷ್ಟ್ರದ ನಿರ್ಮಾಣಕ್ಕೆ ನಾವೆಲ್ಲರೂ ಕಟಿಬದ್ದರಾಗೋಣ ಎಂದು ಹಾರೈಸಿದರು.
ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಅಧ್ಯಕ್ಷತೆ ವಹಿಸಿದ್ದರು. ಪುದು ಗ್ರಾ.ಪಂ. ಉಪಾಧ್ಯಕ್ಷೆ ಲಿಡಿಯೋ ಪಿಂಟೋ, ಸದಸ್ಯ ಇಕ್ಬಾಲ್ ಸುಜೀರ್, ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ, ಪ್ರಮುಖರಾದ ಜಯಪ್ರಕಾಶ್, ಅಬೂಬಕ್ಕರ್ ಫರಂಗಿಪೇಟೆ, ಮಜೀದ್ ಫರಂಗಿಪೇಟೆ, ಕಿಶೋರ್ ಸುಜೀರ್. ಕೆ.ಎಂ. ಅಶ್ರಫ್ ಮಲ್ಲಿ, ಸಿದ್ದಿಕ್ ಸುಜೀರ್ ಗುಡ್ಡೆ ಬಿ.ಎಂ. ಮುಹಮ್ಮದ್ ಮಾಸ್ಟರ್ ತುಂಬೆ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment