ನವದೆಹಲಿ (ಕರಾವಳಿ ಟೈಮ್ಸ್) : ಕೋವಿಡ್-19 ವೈರಸ್ ಕಾರಣದಿಂದ ಇತ್ತೀಚೆಗಷ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಆರೋಗ್ಯದಲ್ಲಿ ಮತ್ತೆ ಏರು-ಪೇರಾದ ಹಿನ್ನಲೆಯಲ್ಲಿ ಅವರನ್ನು ಪುನಃ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇಹ ಬಳಲಿಕೆ ಮತ್ತು ಮೈ-ಕೈ ನೋವಿಂದಾಗಿ ಕೇಂದ್ರ ಗೃಹ ಸಚಿವರನ್ನು ಇಲ್ಲಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಪಾಸಿಟಿವ್ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಇವರು ಬಳಿಕ ನೆಗೆಟಿವ್ ವರದಿಯ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.
ಸದ್ಯ ಅಮಿತ್ ಶಾ ಅವರ ಕೊವಿಡ್ ಪರೀಕ್ಷೆ ನೆಗೆಟಿವ್ ಇದ್ದು, ಬಳಲಿಕೆಯ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ತಿಳಿಸಿದೆ.
0 comments:
Post a Comment