ಬಂಟ್ವಾಳ (ಕರಾವಳಿ ಟೈಮ್ಸ್) : ಬಂಟ್ವಾಳ ಬಿ.ಜೆ.ಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕ್ಷೇತ್ರ ಬಿ.ಜೆ.ಪಿ ಅಧ್ಯಕ್ಷ ದೇವಪ್ಪ ಪೂಜಾರಿ ಧ್ವಜಾರೋಹಣಗೈದರು.
ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ರಾಜ್ಯ ನಗರ ನೀರು ಸರಬರಾಜು ಯೋಜನೆ ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ನಿರ್ದೇಶಕಿ ಸುಲೋಚನ ಜಿ.ಕೆ. ಭಟ್, ಬುಡಾ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಕ್ಷೇತ್ರ ಕಾರ್ಯದರ್ಶಿಗಳಾದ ಸೀತಾರಾಮ ಪೂಜಾರಿ, ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ, ಹರ್ಷಿಣಿ, ಕ್ಷೇತ್ರ ಉಪಾಧ್ಯಕ್ಷರಾದ ರೋನಾಲ್ಡ್ ಡಿ’ಸೋಜ, ಕ್ಷೇತ್ರ ಕೋಶಾಧಿಕಾರಿ ಪ್ರಕಾಶ್ ಅಂಚನ್, ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಯಶೋಧರ ಕರ್ಬೆಟ್ಟು, ದಿನೇಶ್ ಅಮ್ಟೂರು, ಯಶವಂತ ನಾಯ್ಕ, ಕಾರ್ಯಾಲಯ ಕಾರ್ಯದರ್ಶಿ ಗುರುದತ್ ನಾಯಕ್, ಮಹೇಶ್ ಶೆಟ್ಟಿ, ಭಾಸ್ಕರ ಕಾಮಾಜೆ, ಪವನ್ ಕುಮಾರ್ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment