ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ರಾಯಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಾಯಕರಿಗೆ ಶುಭ ಕೋರಿ ಹಾಕಿದ್ದ ಬ್ಯಾನರ್ ಕಿಡಿಗೇಡಿಗಳು ಹರಿದು ಹಾಕಿದ ಘಟನೆ ಭಾನುವಾರ ತಡ ರಾತ್ರಿ ನಡೆದಿದ್ದು, ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿ ಸದಾನಂದ ಕುಲಾಲ್ ಅವರನ್ನು ಮಾಜಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಇತ್ತೀಚೆಗೆ ನೇಮಿಸಲಾಗಿತ್ತು. ಈ ನೇಮಕದ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರು ತಮ್ಮ ನಾಯಕರಿಗೆ ಶುಭ ಕೋರಿದ ಬ್ಯಾನರ್ ರಾಯಿಯಲ್ಲಿ ಅಳವಡಿಸಿದ್ದರು.
ಇದೀಗ ಕಿಡಿಗೇಡಿಗಳು ಈ ಬ್ಯಾನರ್ ಹರಿದು ಶಾಂತಿ ಕದಡುವ ಯತ್ನ ನಡೆಸಿದ್ದಾರೆ. ಕಿಡಿಗೇಡಿಗಳ ಈ ಕೃತ್ಯವನ್ನು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಖಂಡಿಸಿದ್ದಾರೆ.
0 comments:
Post a Comment