ವೇಗದ ಓಟಗಾರ ಉಸೇನ್ ಬೋಲ್ಟ್ ಗೆ ಕೊರೋನಾ ಪಾಸಿಟಿವ್ - Karavali Times ವೇಗದ ಓಟಗಾರ ಉಸೇನ್ ಬೋಲ್ಟ್ ಗೆ ಕೊರೋನಾ ಪಾಸಿಟಿವ್ - Karavali Times

728x90

25 August 2020

ವೇಗದ ಓಟಗಾರ ಉಸೇನ್ ಬೋಲ್ಟ್ ಗೆ ಕೊರೋನಾ ಪಾಸಿಟಿವ್


ಜಮೈಕಾ (ಕರಾವಳಿ ಟೈಮ್ಸ್) : ವಿಶ್ವ ಒಲಿಂಪಿಕ್‍ನಲ್ಲಿ 8 ಬಾರಿ ಚಿನ್ನದ ಪದಕ ತನ್ನದಾಗಿಸಿಕೊಂಡಿರುವ ಜಗತ್ತಿನ ಅತಿ ವೇಗದ ಓಟಗಾರ ಜಮೈಕಾದ ಉಸೇನ್ ಬೋಲ್ಟ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇತ್ತೀಚೆಗಷ್ಟೆ ಉಸೈನ್ ಬೋಲ್ಟ್‍ಗೆ ತನ್ನ 34ನೇ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಸೇರಿ ಭರ್ಜರಿಯಾಗಿ ಆಚರಿಸಿಕೊಂಡಿದ್ದರು. 

ಈ ಕುರಿತು ಸ್ವತಃ ಬೋಲ್ಟ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಬೋಲ್ಟ್, ಎಲ್ಲರಿಗೂ ಶುಭೋದಯ, ನನಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಶನಿವಾರ ನಾನು ಪರೀಕ್ಷೆ ಮಾಡಿಸಿದ್ದೆ. ಹೀಗಾಗಿ ಮನೆಯಲ್ಲೇ ಐಸೋಲೇಶನ್‍ಗೆ ಒಳಗಾಗಿದ್ದೇನೆ. ನನಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ಆದರೆ ಸುರಕ್ಷತೆ ದೃಷ್ಟಿಯಿಂದ ನನ್ನ ಸ್ನೇಹಿತರಿಂದ ದೂರವಿದ್ದೇನೆ. ಸೆಲ್ಫ್ ಕ್ವಾರಂಟೈನ್‍ಗೆ ಒಳಗಾಗಿದ್ದೇನೆ ಎಂದಿದ್ದಾರೆ.

ಅಲ್ಲದೆ ಆರೋಗ್ಯ ಸಚಿವಾಲಯದ ನಿಯಮದ ಪ್ರಕಾರ ನಾನು ಹೇಗೆ ಇತರರಿಂದ ದೂರ ಇರಬಹುದು ಎಂಬುದನ್ನು ತಿಳಿಯುತ್ತೇನೆ. ಸದ್ಯ ಸುರಕ್ಷತೆ ದೃಷ್ಟಿಯಿಂದ ನಾನು ಪ್ರತ್ಯೇಕವಾಗಿದ್ದೇನೆ. ಅಲ್ಲದೆ ಕೊರೊನಾ ವೈರಸ್‍ನ್ನು ಸುಲಭವಾಗಿ ತೆಗೆದುಕೊಂಡಿದ್ದೇನೆ. ನೀವು ಸುರಕ್ಷಿತವಾಗಿರಿ, ಆಲ್‍ರೈಟ್ ಕೂಲ್ ಎಂದು ಟ್ವಿಟ್ಟರ್ ವಿಡಿಯೋದಲ್ಲಿ ಉಸೈನ್ ಬೋಲ್ಟ್ ಹೇಳಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಉಸೈನ್ ಬೋಲ್ಟ್ 34ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಸ್ನೇಹಿತರೊಂದಿಗೆ ಭರ್ಜರಿ ಪಾರ್ಟಿ ಮಾಡಿದ್ದಾರೆ. ಕ್ರಿಕೆಟ್ ಆಟಗಾರ ಕ್ರಿಸ್ ಗೇಲ್, ಫುಟ್‍ಬಾಲ್ ಆಟಗಾರ ರಹೀಮ್ ಸ್ಟೆರ್ಲಿಂಗ್ ಸೇರಿದಂತೆ ಹಲವು ಗಣ್ಯರು ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. 






  • Blogger Comments
  • Facebook Comments

0 comments:

Post a Comment

Item Reviewed: ವೇಗದ ಓಟಗಾರ ಉಸೇನ್ ಬೋಲ್ಟ್ ಗೆ ಕೊರೋನಾ ಪಾಸಿಟಿವ್ Rating: 5 Reviewed By: karavali Times
Scroll to Top