ಬಂಟ್ವಾಳ, ಸೆ. 10, 2020 (ಕರಾವಳಿ ಟೈಮ್ಸ್) : ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಇರ್ವತ್ತೂರು ವಲಯ ಕಾಂಗ್ರೆಸ್ ಸಮಿತಿಯ ನೇತೃತ್ವ ಹಾಗೂ ಬಂಟ್ವಾಳ ಯುವ ಕಾಂಗ್ರೆಸ್ ಸಹಕಾರದಿಂದ ಮಾಜಿ ಸಚಿವ ಬಿ ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಸೆ. 13 ರಂದು ಇರ್ವತ್ತೂರು-ರಝಾನಗರ, ಕಲಾಬಾಗಿಲು ಬುರೂಜ್ ಇಂಗ್ಲೀಷ್ ಮೀಡಿಯಂ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ದೇರಳಕಟ್ಟೆ ಕೆ ಎಸ್ ಹೆಗ್ಡೆ ಆಸ್ವತ್ರೆಯ ಸಹಯೋಗದೊಂದಿಗೆ ಈ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಬೆಳ್ಳಿಗೆ 9 ಗಂಟೆಯಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment