ಮುಂಬೈ, ಸೆ. 22, 2020 (ಕರಾವಳಿ ಟೈಮ್ಸ್) : ಮಹಾರಾಷ್ಟ್ರ ರಾಜ್ಯದ ಭೀವಂಡಿಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ್ದ ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 18ಕ್ಕೇರಿದೆ. ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಮುಂದುವರೆದಿದೆ.
ವಾಣಿಜ್ಯ ನಗರಿ ಮುಂಬೈ ಸಮೀಪದಲ್ಲೇ ಇರುವ ಥಾಣೆ ಜಿಲ್ಲೆಯ ಭೀವಂಡಿಯಲ್ಲಿರುವ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಸೋಮವಾರ 3 ಮಹಡಿ ಹೊಂದಿದ್ದ ಕಟ್ಟಡವೊಂದು ಕುಸಿದು ಬಿದ್ದಿತ್ತು. ಈ ವೇಳೆ ಸುಮಾರು 20 ರಿಂದ 25 ಮಂದಿ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದ್ದರು ಎನ್ನಲಾಗಿತ್ತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‍ಡಿಆರ್‍ಎಫ್) ಸಿಬ್ಬಂದಿ ಸ್ಥಳಕ್ಕೆ ಧೌಡಾಯಿಸಿ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯಾಚರಣೆ ಮಾಡುತ್ತಿದೆ. ಇದುವರೆಗೂ 18 ಮೃತದೇಹಗಳನ್ನು ಹೊರಗೆ ತೆಗೆದಿದ್ದು, ಮಗು ಸಹಿತ 5 ಮಂದಿಯನ್ನು ರಕ್ಷಿಸಲಾಗಿದೆ ಎಂದು ಥಾಣೆ ಮುನ್ಸಿಪಲ್ ಕಾಪೆರ್Çೀರೇಷನ್ ವಕ್ತಾರರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
0 comments:
Post a Comment