ಬೆಂಗಳೂರು, ಸೆ. 24, 2020 (ಕರಾವಳಿ ಟೈಮ್ಸ್) : ಕೊರೋನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೆಪದಲ್ಲಿ ಲೂಟಿ ಹೊಡೆಯುತ್ತಿವೆ. ಸರಕಾರ, ಆರೋಗ್ಯ ಇಲಾಖೆ ಈ ಬಗ್ಗೆ ಏನು ಮಾಡುತ್ತಿದೆ ಎಂದು ಸ್ವತಃ ಸರಕಾರದ ಭಾಗವಾಗಿರುವ ಆಡಳಿತ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸುವ ಮೂಲಕ ಸರಕಾರಕ್ಕೆ ಛಾಟಿ ಬೀಸಿದ್ದಾರೆ.
ಗುರುವಾರ ವಿಧಾನಸಭೆಯಲ್ಲಿ ಬುಧವಾರ ಮೃತಪಟ್ಟ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರಿಗೆ ಸಂತಾಪ ನಿರ್ಣಯ ಚರ್ಚೆಯ ಮೇಲೆ ಮಾತನಾಡಿದ ಯತ್ನಾಳ್, ಕೊರೋನಾ ಚಿಕಿತ್ಸೆ ಹಾಗೂ ಖಾಸಗಿ ಆಸ್ಪತ್ರೆಗಳ ವ್ಯವಹಾರದ ಕುರಿತು ತÀಮಗಾದ ಅನಭವವನ್ನು ಸದನದಲ್ಲಿ ಎಳೆ ಎಳೆಯಾಗಿ ಕೆಲವೇ ನಿಮಿಷದಲ್ಲಿ ಬಿಚ್ಚಿಟ್ಟರು. ಓರ್ವ ಶಾಸಕನಾದ ನನಗೇ ಹೀಗಾದರೆ ಜನ ಸಾಮಾನ್ಯರ ಪಾಡೆನು? ಸರಕಾರ, ಆರೋಗ್ಯ ಇಲಾಖೆ ಏನು ಮಾಡುತ್ತಿದೆ ಎಂದು ಗಂಭೀರವಾಗಿ ಪ್ರಶ್ನಿಸಿದರು.
ಸುರೇಶ್ ಅಂಗಡಿ ನಿಧನದಿಂದ ಆಘಾತಗೊಂಡಿದ್ದೇನೆ. ಏಮ್ಸ್‍ನಂತಹ ದೊಡ್ಡ ಸಂಸ್ಥೆಯಲ್ಲಿಯೇ ಅವರನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದರೆ ನಾವು ಕೋವಿಡ್ ಬಗ್ಗೆ ಗಂಭೀರವಾಗಿ ಚಿಂತಿಸಬೇಕಾಗಿದೆ. ವಾರಕ್ಕೆ ಎರಡು ಬಾರಿ ಲಾಕ್‍ಡೌನ್ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದು ಎಚ್ಚರಿಸಿದರು. ನನಗೆ ಕೊರೊನಾ ಬಾಧಿಸಿದಾಗ ಖಾಸಗಿ ಆಸ್ಪತ್ರೆಯೊಂದು 3 ದಿನಕ್ಕೆ 3.80 ಲಕ್ಷ ರೂಪಾಯಿ ಬಿಲ್ ಮಾಡಿದೆ. ಶಾಸಕನಾದ ನನಗೇ ಇಷ್ಟೊಂದು ಮೊತ್ತದ ಬಿಲ್ ಮಾಡಿದ್ದರೆ ಜನಸಾಮಾನ್ಯರ ಪಾಡೇನು? ಬೇಕಾಬಿಟ್ಟಿಯಾಗಿ ಖಾಸಗಿ ಆಸ್ಪತ್ರೆಗಳು ಹಣ ವಸೂಲಿ ಮಾಡುತ್ತಿವೆ. ಸರಕಾರ ಏನು ಮಾಡುತ್ತಿದೆ? ಇಂತಹ ಆಸ್ಪತ್ರೆಗಳ ಮೇಲೆ ಸರಕಾರಕ್ಕೆ ಯಾವ ನಿಯಂತ್ರಣವಿದೆ ಎಂದು ಪ್ರಶ್ನಿಸಿದರು.
0 comments:
Post a Comment