ಮಂಗಳೂರು, ಸೆ. 26, 2020 (ಕರಾವಳಿ ಟೈಮ್ಸ್) : ಅಖಿಲ ಭಾರತ ಬ್ಯಾರಿ ಪರಿಷತ್ (ರಿ.) ಮಂಗಳೂರು ಇದರ ವತಿಯಿಂದ ಅಕ್ಟೋಬರ್ 3 ರಂದು ನಡೆಯುವ ಬ್ಯಾರಿ ಭಾಷಾ ದಿನಾಚರಣಾ ಪ್ರಯುಕ್ತ, “ಮುನೊಲುಗು ಪಡಿಪು ಎಙನೆ ಇಕ್ಕೊನು (ಭವಿಷ್ಯದಲ್ಲಿ ಶಿಕ್ಷಣ ಹೇಗಿರಬೇಕು?) ಎಂಬ ವಿಷಯದಲ್ಲಿ ಬ್ಯಾರಿ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆಯು ಸೆ. 29 ರಂದು ಮಂಗಳವಾರ ಬೆಳಿಗ್ಗೆ ಗಂಟೆ 10.30ಕ್ಕೆ ನಗರದ ನೆಲ್ಲಿಕಾಯಿ ರಸ್ತೆಯ ನ್ಯಾಷನಲ್ ಟ್ಯುಟೋರಿಯಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ಸ್ಪರ್ಧಾ ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಗುವುದು. ಈ ಬಗ್ಗೆ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9008503993, 9845499527 ಆಥವಾ 9343563717ನ್ನು ಸಂಪರ್ಕಿಸಬಹುದು ಎಂದು ಪರಿಷತ್ ಪ್ರಧಾನ ಕಾರ್ಯದರ್ಶಿ ಹಾಜಿ ಕೆ.ಎಸ್. ಅಬೂಬಕ್ಕರ್ ಪಲ್ಲಮಜಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
26 September 2020
- Blogger Comments
- Facebook Comments
Subscribe to:
Post Comments (Atom)
0 comments:
Post a Comment