ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವೃತ್ತಿಪರ ಕೋರ್ಸ್‍ಗಳಿಗಾಗಿ ಸಿಇಟಿ/ನೀಟ್ ಪರೀಕ್ಷೆ ಬರೆದು ಅರ್ಹರಾದ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಸಾಲ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆನ್ ಲೈನ್ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 18 ಅಂತಿಮ ದಿನಾಂಕವಾಗಿದ್ದು, ನಿಗದಿತ ಅಂತಿಮ ದಿನಾಂಕದೊಳಗೆ ಆನ್ ಲೈನ್ ಅರ್ಜಿಯ ಪ್ರತಿಯೊಂದಿಗೆ ಸಂಬಂಧಪಟ್ಟ ಪೂರಕ ದಾಖಲೆಗಳನ್ನು ವಿದ್ಯಾರ್ಥಿಗಳು ಸಂಬಂಧಪಟ್ಟ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ಕಛೇರಿಗೆ ತಲುಪಿಸತಕ್ಕದ್ದು ಎಂದು ನಿಗಮದ ಪ್ರಕಟಣೆ ತಿಳಿಸಿದೆ.
4 September 2020
- Blogger Comments
- Facebook Comments
Subscribe to:
Post Comments (Atom)
0 comments:
Post a Comment