ನವದೆಹಲಿ, ಸೆ. 23, 2020 (ಕರಾವಳಿ ಟೈಮ್ಸ್) : ಕೊರೋನಾ ವೈರಸ್ ಬಾಧಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿ (65) ಚಿಕಿತ್ಸೆ ಫಲಕಾರಿಯಾದೆ ಬುಧವಾರ ಸಂಜೆ ನಿಧನರಾಗಿದ್ದಾರೆ. ಕಳೆದ ವಾರ ಸುರೇಶ್ ಅಂಗಡಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಕೇಂದ್ರದಲ್ಲಿ ಸಚಿವರಾಗಿದ್ದ ಸುರೇಶ್ ಅಂಗಡಿ ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಪ್ರಬಲ ಮುಖಂಡರಾಗಿದ್ದರು.
ಕೇಂದ್ರ ಸಚಿವ ಸಂಪುಟದ ರಾಜ್ಯ ರೈಲ್ವೇ ಸಚಿವರಾಗಿದ್ದ ಅಂಗಡಿ ಅವರಿಗೆ ಅಧಿವೇಶನ ಆರಂಭವಾದಾಗ ಎಲ್ಲ ಸಂಸದರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾದ ಸಂದರ್ಭ ಇವರಿಗೆ ಸೋಂಕು ತಗುಲಿರೋದು ದೃಢಪಟ್ಟಿತ್ತು.
4 ಬಾರಿ ಲೋಕಸಭೆ ಸಂಸದರಾಗಿ ಸುರೇಶ್ ಅಂಗಡಿ ಆಯ್ಕೆಯಾಗಿದ್ದರು. 2004, 2009, 2014 ಮತ್ತು 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
0 comments:
Post a Comment