ಕೋತಿ ಮೊಸರು ತಿಂದು ಮೇಕೆಯ ಮೂತಿಗೆ ಮೆತ್ತಿದಂತೆ : ಟ್ವೀಟ್ ಮೂಲಕ ವ್ಯಂಗ್ಯವಾಡಿದ ಕಾಂಗ್ರೆಸ್
ಬೆಂಗಳೂರು, ಸೆ. 11, 2020 (ಕರಾವಳಿ ಟೈಮ್ಸ್) : ಕಲಬುರಗಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ವಶಪಡಿಸಿಕೊಳ್ಳಲಾದ 1,300 ಕೆಜಿ ಗಾಂಜಾ ಪ್ರಕರಣದಲ್ಲಿ ಬಂಧಿತ ಪ್ರಮುಖ ಆರೋಪಿ ಚಂದ್ರಕಾಂತ್ ಚೌವ್ಹಾಣ್ ಬಿಜೆಪಿ ಕಾರ್ಯಕರ್ತ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ಸಚಿತ್ರವಾಗಿ ವೈರಲ್ ಆಗುತ್ತಿದ್ದಂತೆ ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿ ನಾಯಕರ ಕಾಲೆಳೆದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, “ಕಲ್ಬುರ್ಗಿಯಲ್ಲಿ ವಶಪಡಿಸಿಕೊಂಡ 1,200 ಕೆಜಿ ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಕಾರ್ಯಕರ್ತ. ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳ ತಾಣವಾದ ಬಿಜೆಪಿ “ಕೋತಿ ಮೊಸರು ತಿಂದು ಮೇಕೆಯ ಮೂತಿಗೆ ಮೆತ್ತಿದಂತೆ” ಎಂಬ ಗಾದೆ ಮಾತಿನಂತೆ ಅನ್ಯರತ್ತ ಹುಸಿ ಆರೋಪ ಮಾಡಿ ತಮ್ಮ ಮಾನ ಮುಚ್ಚಿಕೊಳ್ಳಲು ಯತ್ನಿಸುತ್ತಿದೆ” ಎಂದು ಬರೆದುಕೊಂಡಿದೆ.
ಕಲಬುರಗಿ ಗಾಂಜಾ ಪ್ರಕರಣದ ಆರೋಪಿ ಬಿಜೆಪಿ ಕಾರ್ಯಕರ್ತರ ಜೊತೆ ತೆಗೆಸಿಕೊಂಡಿರುವ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದ್ದಂತೆ ಈ ಬಗ್ಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಚಂದ್ರಕಾಂತ್ ಬಿಜೆಪಿ ಕಾರ್ಯಕರ್ತ ಎಂದು ಅವನ ಫೋಟೋ ಹಾಕಿ ಬಿಜೆಪಿ ನಾಯಕರ ಕಾಲೆಳೆದಿದ್ದಾರೆ.
0 comments:
Post a Comment