ಅಲಹಾಬಾದ್ ಕೋರ್ಟ್ ಆದೇಶ : ಸಿಎಎ ವಿರೋಧಿ ಭಾಷಣಕ್ಕೆ ಬಂಧಿಸಲ್ಪಟ್ಟಿದ್ದ ಡಾ. ಕಫೀಲ್ ಖಾನ್ ಮಥುರಾ ಜೈಲಿಂದ ರಿಲೀಸ್ - Karavali Times ಅಲಹಾಬಾದ್ ಕೋರ್ಟ್ ಆದೇಶ : ಸಿಎಎ ವಿರೋಧಿ ಭಾಷಣಕ್ಕೆ ಬಂಧಿಸಲ್ಪಟ್ಟಿದ್ದ ಡಾ. ಕಫೀಲ್ ಖಾನ್ ಮಥುರಾ ಜೈಲಿಂದ ರಿಲೀಸ್ - Karavali Times

728x90

2 September 2020

ಅಲಹಾಬಾದ್ ಕೋರ್ಟ್ ಆದೇಶ : ಸಿಎಎ ವಿರೋಧಿ ಭಾಷಣಕ್ಕೆ ಬಂಧಿಸಲ್ಪಟ್ಟಿದ್ದ ಡಾ. ಕಫೀಲ್ ಖಾನ್ ಮಥುರಾ ಜೈಲಿಂದ ರಿಲೀಸ್



ಮಥುರಾ (ಕರಾವಳಿ ಟೈಮ್ಸ್) : ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭಾಷಣ ಮಾಡಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಉತ್ತರ ಪ್ರದೇಶದ ವೈದ್ಯ ಡಾ. ಕಫೀಲ್ ಖಾನ್ ಅವರನ್ನು ಬುಧವಾರ ಮಧ್ಯ ರಾತ್ರಿ ಮಥುರಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಆದೇಶ ನೀಡಿದ್ದ ಅಲಹಾಬಾದ್ ಹೈಕೋರ್ಟ್, ಕಫೀಲ್ ಖಾನ್ ಬಂಧನ ಅಕ್ರಮ ಎಂದು ಹೇಳಿತ್ತು. ಅಲ್ಲದೆ ಕಫೀಲ್ ಅವರನ್ನೂ ಕೂಡಲೇ ಬಿಡುಗಡೆ ಮಾಡುವಂತೆ ಸರಕಾರಕ್ಕೆ ತಾಕೀತು ಮಾಡಿತ್ತು. ಕಫೀಲ್ ಭಾಷಣದಲ್ಲಿ ದ್ವೇಷ ಅಥವಾ ಹಿಂಸೆಯನ್ನು ಪ್ರಚೋದಿಸುವ ಯಾವುದೇ ಅಂಶ ಕಂಡು ಬಂದಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿತ್ತು. ನ್ಯಾಯಾಲಯದ ಆದೇಶ ಹಿನ್ನೆಲೆಯಲ್ಲಿ ಕಫೀಲ್ ಅವರನ್ನು ತಡರಾತ್ರಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. 

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕಫೀಲ್ ಅವರು, ಸಿಎಎ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಜನವರಿ 29ರಂದು ಬಂಧನಕ್ಕೊಳಪಡಿಸಲಾಗಿತ್ತು. ಸಮುದಾಯಗಳ ಮಧ್ಯೆ ಧರ್ಮದ ಆಧಾರದಲ್ಲಿ ದ್ವೇಷ ಬಿತ್ತುವ ಪ್ರಯತ್ನ ಮಾಡಿರುವ ಆರೋಪದಡಿ ಅವರನ್ನು ಬಂಧನಕ್ಕೊಳಪಡಿಸಲಾಗಿತ್ತು. ಇದಾದ ಎರಡು ದಿನಗಳ ನಂತರ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.









  • Blogger Comments
  • Facebook Comments

0 comments:

Post a Comment

Item Reviewed: ಅಲಹಾಬಾದ್ ಕೋರ್ಟ್ ಆದೇಶ : ಸಿಎಎ ವಿರೋಧಿ ಭಾಷಣಕ್ಕೆ ಬಂಧಿಸಲ್ಪಟ್ಟಿದ್ದ ಡಾ. ಕಫೀಲ್ ಖಾನ್ ಮಥುರಾ ಜೈಲಿಂದ ರಿಲೀಸ್ Rating: 5 Reviewed By: karavali Times
Scroll to Top