ನವದೆಹಲಿ, ಸೆ. 27, 2020 (ಕರಾವಳಿ ಟೈಮ್ಸ್) : ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ (82) ಅವರು ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಮಲ್ಟಿಆರ್ಗನ್ ಡಿಸ್ಫಂಕ್ಷನ್ ಸಿಂಡ್ರೋಮ್ ನಿಂದ ಬಳಲುತ್ತಿದ್ದ ಜಸ್ವಂತ್ ಸಿಂಗ್ ಅವರು ಕಳೆದ ಜೂನ್. 25 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ 6.55 ರ ವೇಳೆಗೆ ವಿಧಿವಶರಾಗಿದ್ದಾರೆ. ಕೊನೆಯುಸಿರೆಳೆದಿದ್ದಾರೆ.
ಜಸ್ವಂತ್ ಸಿಂಗ್ ಅವರು ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ರಾಜಸ್ಥಾನದ ಜೋಧ್ ಪುರ ಮೂಲದವರಾದ ಜಸ್ವಂತ್ ಸಿಂಗ್ ಅವರು, ಆರಂಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ರಾಜಕೀಯ ಆಕಾಂಕ್ಷೆಯಿಂದ ಸೇನೆಗೆ ನಿವೃತ್ತಿ ಘೋಷಿಸಿ ಸಕ್ರಿಯ ರಾಜಕೀಯಕ್ಕೆ ಸೇರ್ಪಡೆಯಾಗಿದ್ದರು.
ಜಸ್ವಂತ್ ಸಿಂಗ್ ಅವರು ಬಿಜೆಪಿ ಪಕ್ಷದಿಂದ ಐದು ಬಾರಿ ರಾಜ್ಯ ಸಭೆಗೆ ಆಯ್ಕೆಯಾಗಿದ್ದರು. ( 1980, 1986, 1998, 1999, 2004) ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. (1990, 1991,1996, 2009). ಕೇಂದ್ರ ಹಣಕಾಸು, ವಿದೇಶಾಂಗ, ಮತ್ತು ರಕ್ಷಣಾ ಖಾತೆಗಳಂತಹ ಪ್ರಮುಖ ಖಾತೆಗಳನ್ನು ಜಸ್ವಂತ್ ಸಿಂಗ್ ನಿಭಾಯಿಸಿದ್ದರು.
0 comments:
Post a Comment