ಬೆಂಗಳೂರು, ಸೆ. 27, 2020 (ಕರಾವಳಿ ಟೈಮ್ಸ್) : ರೈತ ಸಂಘಟನೆಗಳು ನಾಳೆ (ಸೆ. 28 ಸೋಮವಾರ) ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿರುವುದರಿಂದ ರಾಜಾದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಎಂದಿನಂತೆ ಬಸ್ ಸಂಚಾರ ಮುಂದುವರೆಯಲಿದೆ. ಜನತೆಗೆ ಈ ಬಗ್ಗೆ ಯಾವುದೇ ಆತಂಕ ಬೇಡ ಎಂದವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ಬಂದ್ ಹಿನ್ನೆಲೆಯಲ್ಲಿ ಬಸ್ಸುಗಳಿಗೆ ಮತ್ತು ಇತರ ಸರಕಾರಿ ಆಸ್ತಿಪಾಸ್ತಿಗಳಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಹೆಚ್ಚಿನ ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಿಕೊಡುವಂತೆ ಈಗಾಗಲೇ ಹಿರಿಯ ಪೆÇಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ ಬಸ್ಸುಗಳಿಗೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟು ಮಾಡಲು ಯಾರೇ ಯತ್ನಿಸಿದರೂ ಕೂಡ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲು ನಮ್ಮ ಸರಕಾರ ಹಿಂಜರಿಯುವುದಿಲ್ಲ ಎಂದು ಸವದಿ ಎಚ್ಚರಿಸಿದ್ದಾರೆ.
0 comments:
Post a Comment