ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಕೃಷ್ಣೈಕ್ಯ - Karavali Times ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಕೃಷ್ಣೈಕ್ಯ - Karavali Times

728x90

6 September 2020

ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಕೃಷ್ಣೈಕ್ಯ



ಮಂಗಳೂರು (ಕರಾವಳಿ ಟೈಮ್ಸ್) : ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನದ ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ (79) ಅವರು ಶನಿವಾರ ತಡ ರಾತ್ರಿ  ಕೃಷ್ಣೈಕ್ಯರಾಗಿದ್ದಾರೆ.

ಸೆ. 2 ರಂದು ಚಾತುರ್ಮಾಸ್ಯವನ್ನು ಪೂರೈಸಿದ್ದ ಶ್ರೀಗಳು ಶನಿವಾರ ರಾತ್ರಿ 12.45ರ ವೇಳೆಗೆ ಎಡನೀರು ಮಠದಲ್ಲಿ ಕೃಷ್ಣೈಕ್ಯರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಸ್ವಾಮೀಜಿ ಅನಾರೋಗ್ಯಕ್ಕೊಳಗಾಗಿದ್ದರು. ಶನಿವಾರ ರಾತ್ರಿ ಪೂಜೆ ಮುಗಿಸಿ ಊಟ ಮಾಡಿದ್ದ ಶ್ರೀಗಳು, ಮಧ್ಯರಾತ್ರಿಯ ವೇಳೆ ಅಸ್ತಂಗತರಾಗಿದ್ದಾರೆ.

ನವಂಬರ್ 14, 1960ರಿಂದ ಎಡನೀರು ಮಠಾಧಿಶರಾಗಿದ್ದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ, ಸಂಗೀತ, ಯಕ್ಷಗಾನ, ಶಿಕ್ಷಣ, ಪ್ರವಾಸೋದ್ಯಮ ಸಹಿತ ಧಾರ್ಮಿಕ ಕ್ಷೇತ್ರಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಡನೀರು ಮಠದ ಕೊಡುಗೆ ಮಹತ್ವದ್ದಾಗಿತ್ತು. ಅಲ್ಲದೆ ಕಾಸರಗೋಡಿನಲ್ಲಿ ಕನ್ನಡ ಸಂಸ್ಕೃತಿಯ ಕೇಂದ್ರವಾಗಿ ಎಡನೀರು ಗುರುತಿಸಲ್ಪಟ್ಟಿತ್ತು. 

ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ, ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು. ಪ್ರತೀ ವರ್ಷ ಯಕ್ಷಗಾನ ಸಪ್ತಾಹ, ತಾಳಮದ್ದಳೆ ಕೂಟಗಳನ್ನು ನಡೆಸುತ್ತಿದ್ದರು. ಶ್ರೀಗಳು ಹರಿಕಥೆಯನ್ನು ಸಹ ಮಾಡುತ್ತಿದ್ದರು.

















  • Blogger Comments
  • Facebook Comments

0 comments:

Post a Comment

Item Reviewed: ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಕೃಷ್ಣೈಕ್ಯ Rating: 5 Reviewed By: karavali Times
Scroll to Top