ಮಂಗಳೂರು (ಕರಾವಳಿ ಟೈಮ್ಸ್) : ದ ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ರಾಜಕೀಯ ಧುರೀಣ, ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಶಸ್ತಿ ಪುರಸ್ಕೃತರಾದ ದಿವಂಗತ ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಸಭೆ ಮಂಗಳವಾರ ನಡೆಯಿತು.
ಮಾಜಿ ಸಚಿವ ಬಿ ರಮಾನಾಥ ರೈ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಮಾಜಿ ಸಚಿವ, ಮಂಗಳೂರು ಶಾಸಕ ಯು ಟಿ ಖಾದರ್, ದ ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕೆ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜ, ಮಾಜಿ ಶಾಸಕ ಜೆ ಆರ್ ಲೋಬೊ, ಇಬ್ರಾಹಿಂ ಕೋಡಿಜಾಲ್, ಮಾಜಿ ಮೇಯರ್ ಕವಿತಾ ಸನಿಲ್, ಶಶಿಧರ್ ಹೆಗ್ಡೆ, ಮಂಗಳೂರು ತಾ ಪಂ ಅಧ್ಯಕ್ಷ ಮುಹಮ್ಮದ್ ಮೋನು, ಬಂಟ್ವಾಳ ತಾ ಪಂ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment