ಬೆಂಗಳೂರು, ಸೆ. 10, 2020 (ಕರಾವಳಿ ಟೈಮ್ಸ್) : ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕೊರೊನಾ ಕಾಣಿಸಿಕೊಂಡ ಕಾರಣ ಪ್ರಭು ಚೌಹಾಣ್ ಅವರು ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್‍ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೆ ಸಚಿವರ ವಾಹನ ಚಾಲಕಗೆ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಪ್ರಭು ಚೌಹಾಣ್ ಕೊರೊನಾ ಟೆಸ್ಟ್ ಮಾಡಿಸಿದ್ದರು. ಟೆಸ್ಟ್ ವರದಿಯಲ್ಲಿ ಅವರಿಗೆ ಕೊರೊನಾ ಪಾಸಿಟಿವ್ ದೃಢಟ್ಟಿದೆ. ಇವರ ಜೊತೆಗೆ ಬೆಂಗಳೂರಿನ ಆಪ್ತ ಸಹಾಯಕ ಹಾಗೂ ಬೀದರಿನಲ್ಲಿರುವ ಸಚಿವರ ಗನ್‍ಮ್ಯಾನ್‍ಗೂ ಸೋಂಕು ದೃಢಪಟ್ಟಿದೆ.
ಈಗಾಗಲೇ ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿಕೆಶಿ, ಸಚಿವರಾದ ಕೆ ಎಸ್ ಈಶ್ವರಪ್ಪ ಮತ್ತು ಶಶಿಕಲಾ ಜೊಲ್ಲೆ ಅವರಿಗೆ ಕೊರೊನಾ ಪಾಸಿಟವ್ ಕಾಣಿಸಿಕೊಂಡಿತ್ತು. ಇದೀಗ ಮತೋರ್ವ ಸಚಿವ ಪ್ರಭು ಚೌಹಾಣ್ ಗೂ ಪಾಸಿಟಿವ್ ದೃಢಪಟ್ಟಿದೆ.
0 comments:
Post a Comment