ನವದೆಹಲಿ, ಸೆ. 30, 2020 (ಕರಾವಳಿ ಟೈಮ್ಸ್) : ಕರ್ನಾಟಕ ವಿಧಾನಪರಿಷತ್ 4 ಸ್ಥಾನಗಳಿಗೆ ಚುನಾವಣಾ ಆಯೋಗ ಚುನಾವಣಾ ದಿನಾಂಕ ಪ್ರಕಟಿಸಿದ್ದು, ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದೆ.
ಅಕ್ಟೋಬರ್ 1 ರಂದು ಪರಿಷತ್ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಕ್ಟೋಬರ್ 1ರಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಅ. 8 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆ ಅ. 9 ರಂದು ನಡೆಯಲಿದ್ದು, ಅ. 12 ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 2 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ. ಕಳೆದ ಜೂನ್ 30 ಕ್ಕೆ ಚೌಡರೆಡ್ಡಿ ತೂಪಲ್ಲಿ, ಎಸ್.ವಿ. ಸಂಕನೂರ, ಶರಣಪ್ಪ ಮಟ್ಟೂರು ಮತ್ತು ಪುಟ್ಟಣ್ಣ ಅವರ ಅವಧಿ ಕೊನೆಗೊಂಡಿತ್ತು. ಈ ಸ್ಥಾನಗಳಿಗೆ ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದೆ.
0 comments:
Post a Comment