ಬಂಟ್ವಾಳ, ಸೆ. 13, 2020 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಮಾತಾ ಲಕ್ಷಣಿ ಶಾಂತಿಧಾಮ ವೃದ್ಧಾಶ್ರಮ ಲಕ್ಷಣಿ ನಗರ-ಮೇರಮಜಲು ಇಲ್ಲಿನ ವಾಸಿಗಳೊಂದಿಗೆ ಸಹಭೋಜನ ಕಾರ್ಯಕ್ರಮ ಭಾನುವಾರ ನಡೆಸಲಾಯಿತು.
ಈ ಸಂದರ್ಭ ಜಿ ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು ಮೊದಲಾದವರು ಭಾಗವಹಿಸಿದ್ದರು.
0 comments:
Post a Comment