ಬಂಟ್ವಾಳ, ಸೆ. 24, 2020 (ಕರಾವಳಿ ಟೈಮ್ಸ್) : ಭೂ ಸುಧಾರಣಾ ಕಾಯಿದೆ, ಕಾರ್ಮಿಕ ಕಾಯಿದೆ, ಎ.ಪಿ.ಎಂ.ಸಿ ಹಾಗೂ ವಿದ್ಯುತ್ ಕಾಯಿದೆ ತಿದ್ದುಪಡಿ ವಿರೋಧಿಸಿ ಬಂಟ್ವಾಳ ತಾಲೂಕಿನ ರೈತ, ದಲಿತ, ಕಾರ್ಮಿಕ, ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಗುರುವಾರ ಬಿ ಸಿ ರೋಡಿನ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತÁಡಿದ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಯಾದವ ಶೆಟ್ಟಿ, ಸರಕಾರವು ರೈತರ ಭೂಮಿಯನ್ನು ಕಿತ್ತುಕೊಂಡು, ಅಂಬಾನಿ, ಅದಾನಿ ಮುಂತಾದವರಿಗೆ ಲಾಭ ಮಾಡಿಕೊಡುತ್ತಿರುವ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿದರು.
ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡಿಸ್, ಸಿಐಟಿಯು ಮುಖಂಡ ರಾಮಣ್ಣ ವಿಟ್ಲ, ರೈತ ಸಂಘದ ತಾಲೂಕು ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಡಿ ವೈ ಎಫ್ ಐ ಮುಖಂಡ, ನ್ಯಾಯವಾದಿ ತುಳಸೀದಾಸ್ ವಿಟ್ಲ, ಪ್ರಮುಖರಾದ ಸುರೇಂದ್ರ ಕೋಟ್ಯಾನ್, ಹಾರೂನ್ ರಶೀದ್, ಅಲ್ತಾಫ್ ತುಂಬೆ, ಮಹಮ್ಮದ್ ಇಕ್ಬಾಲ್ ಹಳೆಮನೆ, ಪ್ರಕಾಶ್ ಶೆಟ್ಟಿ ಪೆರಾಭೆ, ಲಿಯಾಕತ್ ಖಾನ್ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
0 comments:
Post a Comment