ಬಂಟ್ವಾಳ, ಸೆ. 10, 2020 (ಕರಾವಳಿ ಟೈಮ್ಸ್) : ರೈತ, ದಲಿತ, ಕಾರ್ಮಿಕ, ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಭೂ ಸುಧಾರಣಾ ಕಾಯಿದೆ, ಎಪಿಎಂಸಿ ಕಾಯಿದೆ, ಕಾರ್ಮಿಕ ಕಾನೂನು ಅಗತ್ಯ ಸರಕುಗಳ ಕಾಯಿದೆಗಳ ತಿದ್ದುಪಡಿ, ವಿದ್ಯುತ್ ಖಾಸಗೀಕರಣ, ಮೇಲ್ಜಾತಿಯವರಿಗೆ 10% ಮೀಸಲಾತಿ ಈ ಎಲ್ಲಾ ವಿಷಯಗಳ ಬಗ್ಗೆ ಸೆ 11 ಶುಕ್ರವಾರ (ನಾಳೆ) ಬೆಳಿಗ್ಗೆ 10 ಗಂಟೆಗೆ ಬಿ ಸಿ ರೋಡು ರಂಗೋಲಿ ಸಭಾಂಗಣದಲ್ಲಿ ವಿಚಾರಗೋಷ್ಠಿ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಚಿಂತಕ ಶಿವಸುಂದರ್, ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ವಿಚಾರ ಮಂಡಿಸಲಿದ್ದಾರೆ. ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಯಾದವ ಶೆಟ್ಟಿ, ಹಾಗೂ ವಿವಿಧ ದಲಿತ ಚಳುವಳಿಗಳ ನಾಯಕರು, ಸಿಐಟಿಯು, ಡಿ ವೈ ಎಫ್ ಐ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ನಾಯಕರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
0 comments:
Post a Comment