ಬೆಂಗಳೂರು, ಸೆ. 13, 2020 (ಕರಾವಳಿ ಟೈಮ್ಸ್) : ಸೆಪ್ಟೆಂಬರ್ 21 ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜು ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಗೈಡ್ ಲೈನ್ ಸಿದ್ದಪಡಿಸುತ್ತಿದೆ ಎಂದು ತಿಳಿದು ಬಂದಿದೆ.
ಕೇಂದ್ರ ಸರಕಾರದ ಅನುಮತಿ ಮೇರೆಗೆ ಶಾಲಾ-ಕಾಲೇಜು ಪ್ರಾರಂಭಕ್ಕೆ ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿ ಮಾರ್ಗಸೂಚಿ ಬಿಡುಗಡೆ ಮಾಡಲು ಸಿದ್ದತೆ ನಡೆಸುತ್ತಿದೆ. ಮುಂದಿನ ಒಂದೆರಡು ದಿನಗಳಲ್ಲಿ ಸರಕಾರದ ಈ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಮಾರ್ಗಸೂಚಿಯ ಪ್ರಕಾರ ಶಾಲಾ-ಕಾಲೇಜು ಪ್ರಾರಂಭಿಸಲು ಸರಕಾರ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.
ಸೆಪ್ಟೆಂಬರ್ 21 ರಿಂದ ಆರಂಭಿಕ ಹಂತದಲ್ಲಿ 9-12ನೇ ತರಗತಿಗಳನ್ನು ಮಾತ್ರ ಪ್ರಾರಂಭಿಸಲಿದ್ದು, ಬಳಿಕ ಹಂತ ಹಂತವಾಗಿ ಉಳಿದ ತರಗತಿಗಳನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.
ಸರಕಾರ ಸಿದ್ದಪಡಿಸುತ್ತಿರುವ ಮಾರ್ಗಸೂಚಿ ಪ್ರಕಾರ ಮಕ್ಕಳು ಶಾಲೆಗೆ ಕಡ್ಡಾಯವಾಗಿ ಬರುವಂತೆ ಒತ್ತಾಯ ಮಾಡುವಂತಿಲ್ಲ, ಶಾಲೆಗೆ ಬರುವ ಪ್ರತಿ ವಿದ್ಯಾರ್ಥಿಯೂ ಪೆÇೀಷಕರಿಂದ ಒಪ್ಪಿಗೆ ಪತ್ರ ತರಬೇಕು, ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರದಲ್ಲಿ ಕುಳಿತುಕೊಳ್ಳಲು ಶಾಲಾಡಳಿತ ಡೆಸ್ಕ್ ವ್ಯವಸ್ಥೆ ಮಾಡಬೇಕು, ಪ್ರತಿ ದಿನ ಮಕ್ಕಳಿಗೆ ಥರ್ಮಲ್ ಸ್ಕ್ಯಾನಿಂಗ್ ನಡೆಸಬೇಕು, ಮಕ್ಕಳು ಹಾಗೂ ಸಿಬ್ಬಂದಿ ಮಾಸ್ಕ್, ಸ್ಯಾನಿಟೈಸ್ ಬಳಸುವುದು ಕಡ್ಡಾಯ, ಪ್ರತಿ ಕೊಠಡಿಗಳು ಪ್ರತಿನಿತ್ಯ ಸ್ಯಾನಿಟೈಸ್ ಮಾಡಬೇಕು, ಮಕ್ಕಳು ಶಾಲಾ ಆವರಣದಲ್ಲಿ ಗುಂಪುಗೂಡಿ ವರ್ತಿಸದಂತೆ ಶಾಲಾಡಳಿತ ಮಂಡಳಿ ಎಚ್ಚರ ವಹಿಸಬೇಕು, ಶೌಚಾಲಯ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿರಬೇಕು, ಲೈಬ್ರರಿಯಲ್ಲಿ ಲೆಕ್ಕಕ್ಕಿಂತ ಅಧಿಕ ಮಕ್ಕಳು ಸೇರದಂತೆ ಕ್ರಮ ಕೈಗೊಳ್ಳಬೇಕು, ಆಟ, ಊಟ, ಪ್ರಾರ್ಥನೆ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ವ್ಯವಸ್ಥೆ ಮಾಡಬೇಕು, ಗುಂಪು ಕ್ರೀಡೆಗೆ ಅವಕಾಶವಿಲ್ಲ, ಮಕ್ಕಳು ಶಾಲೆಗೆ ಬರುವಾಗ, ಹೋಗುವಾಗ ಸಾಮಾಜಿಕ ಅಂತರ ಕಾಪಾಡುವಂತೆ ಕ್ರಮ ವಹಿಸಬೇಕು, ಶಾಲಾ ಸಿಬ್ಬಂದಿ ಮಾಸ್ಕ್, ಗ್ಲೌಸ್ ಹಾಕಿಕೊಳ್ಳುವುದು ಕಡ್ಡಾಯ ಇವೇ ಮೊದಲಾದ ಮುನ್ಸೂಚನೆಗಳನ್ನು ಕೈಗೊಂಡು ಶಾಲಾರಂಭಕ್ಕೆ ಸರಕಾರ ಸಿದ್ದತೆ ನಡೆಸಿದೆ.
0 comments:
Post a Comment