ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೋನಾಗೆ ಬಲಿ : ಬೆಡ್ ವ್ಯವಸ್ಥೆ ಸಿಗದ ಬಗ್ಗೆ ಅಭಿಮಾನಿಗಳ ಆಕ್ರೋಶ - Karavali Times ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೋನಾಗೆ ಬಲಿ : ಬೆಡ್ ವ್ಯವಸ್ಥೆ ಸಿಗದ ಬಗ್ಗೆ ಅಭಿಮಾನಿಗಳ ಆಕ್ರೋಶ - Karavali Times

728x90

2 September 2020

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೋನಾಗೆ ಬಲಿ : ಬೆಡ್ ವ್ಯವಸ್ಥೆ ಸಿಗದ ಬಗ್ಗೆ ಅಭಿಮಾನಿಗಳ ಆಕ್ರೋಶ



ಶಿವಮೊಗ್ಗ (ಕರಾವಳಿ ಟೈಮ್ಸ್) : ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ (67) ಅವರು ಕೋವಿಡ್ ಸೋಂಕಿನಿಂದಾಗಿ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಪ್ಪಾಜಿ ಗೌಡ ಅವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಸಹಿತ ಬಂಧು-ಬಳಗವನ್ನು ಅಗಲಿದ್ದಾರೆ. ಮಾಜಿ ಶಾಸಕರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಕೊರೊನಾ ಶಿಷ್ಠಾಚಾರ ಗಣನೆಗೆ ಪಡೆಯದೆ ಸಾವಿರಾರು ಸಂಖ್ಯೆಯ ಅವರ ಅಭಿಮಾನಿಗಳು ಆಸ್ಪತ್ರೆ ಮುಂದೆ ಜಮಾಯಿಸಿದ್ದರು. ಸೂಕ್ತ ಸಮಯದಲ್ಲಿ ಬೆಡ್ ಸಿಗಲಿಲ್ಲ ಎಂದು ನೆರೆದಿದ್ದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಐಎಸ್‍ಎಲ್ ನೌಕರರಾಗಿ ಜೀವನ ಆರಂಭಿಸಿದ್ದ ಅವರು ಕಾರ್ಮಿಕ ನಾಯಕರಾಗಿ ಬೆಳೆದು ನಂತರ ರಾಜಕೀಯ ಕ್ಷೇತ್ರದಲ್ಲಿ ಬೆಳೆದಿದ್ದರು. ಮಧ್ಯರಾತ್ರಿ 2 ಗಂಟೆಗೆ ಪಾರ್ಥಿವ ಶರೀರವನ್ನು ಭದ್ರಾವತಿಯ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದೆ. 








  • Blogger Comments
  • Facebook Comments

0 comments:

Post a Comment

Item Reviewed: ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೋನಾಗೆ ಬಲಿ : ಬೆಡ್ ವ್ಯವಸ್ಥೆ ಸಿಗದ ಬಗ್ಗೆ ಅಭಿಮಾನಿಗಳ ಆಕ್ರೋಶ Rating: 5 Reviewed By: karavali Times
Scroll to Top