ಗಾಯನ ಲೋಕದ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಬಾರದ ಲೋಕಕ್ಕೆ - Karavali Times ಗಾಯನ ಲೋಕದ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಬಾರದ ಲೋಕಕ್ಕೆ - Karavali Times

728x90

25 September 2020

ಗಾಯನ ಲೋಕದ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಬಾರದ ಲೋಕಕ್ಕೆ



ಚೆನ್ನೈ, ಸೆ. 25, 2020 (ಕರಾವಳಿ ಟೈಮ್ಸ್) : ಕಳೆದ ಹಲವು ದಿನಗಳಿಂದ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ. 

ಮಧ್ಯಾಹ್ನ ಸುಮಾರು 1.4 ರ ವೇಳೆಗೆ ಎಸ್.ಪಿ.ಬಿ. ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪುತ್ರ ಚರಣ್ ಅಧಿಕೃತವಾಗಿ ಹೇಳಿದರು. ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಆಗಸ್ಟ್ 5 ರಂದು ಅವರನ್ನು ಎಂಜಿಎಂ ಹೆಲ್ತ್‍ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಸ್ಟ್ 13ರ ತಡರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತಜ್ಞ ವೈದ್ಯರ ತಂಡದಿಂದ ಆರೈಕೆ ಮಾಡಲಾಗುತ್ತಿತ್ತು. ಆಗಸ್ಟ್ 24ರಂದು ಅವರ ಕೊರೊನಾ ವರದಿ ನೆಗೆಟಿವ್ ಬಂದಿತ್ತು.

ಆಗಸ್ಟ್ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟಕ್ಕೆ ತೊಂದರೆಯಾಗಿದ್ದರಿಂದ ಎಸ್‍ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ಪರೀಕ್ಷೆಯಿಂದ ಅವರಿಗೆ ಕೋವಿಡ್-19 ಸೋಂಕಿನ ಲಕ್ಷಣಗಳಿರುವುದು ದೃಢಪಟ್ಟಿತ್ತು. ಮನೆಯಲ್ಲಿಯೇ ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚಿಸಿದ್ದರು. ಆದರೆ, ಕುಟುಂಬದ ಸದಸ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕದಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕವೇ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಚೆನ್ನೈನ ಫಾರ್ಮ್ ಹೌಸ್‍ನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಜುಲೈನಲ್ಲಿ ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಸಾಹಿತಿ ವೈರಮುತ್ತು ರಚಿಸಿದ್ದ ಹಾಡಿಗೆ ಧ್ವನಿ ನೀಡಿದ್ದರು. 

ಇವರ ಕಲಾ ಸೇವೆಗೆ ಭಾರತ ಸರಕಾರ 2011ರಲ್ಲಿ ಪದ್ಮಶ್ರೀ, 2011ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿತ್ತು. 1946ರ ಜೂನ್ 4 ರಂದು ಜನಿಸಿದ್ದ ಎಸ್‍ಪಿಬಿ ಕನ್ನಡ, ತಮಿಳು, ತೆಲುಗು, ಹಿಂದಿ, ಮಳಯಾಳಂ ಸೇರಿದಂತೆ ಒಟ್ಟು 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡನ್ನು ಹಾಡಿದ್ದಾರೆ. 










  • Blogger Comments
  • Facebook Comments

0 comments:

Post a Comment

Item Reviewed: ಗಾಯನ ಲೋಕದ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಬಾರದ ಲೋಕಕ್ಕೆ Rating: 5 Reviewed By: karavali Times
Scroll to Top