ನವದೆಹಲಿ, ಸೆ. 27, 2020 (ಕರಾವಳಿ ಟೈಮ್ಸ್) : ಬಿಜೆಪಿ ನಾಯಕಿ ಉಮಾ ಭಾರತಿ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಅವರು ಸ್ವಯಂ ನಿರ್ಬಂಧಕ್ಕೊಳಪಟ್ಟಿದ್ದಾರೆ.
ಈ ಬಗ್ಗೆ ಉಮಾಭಾರತಿ ಅವರು ಟ್ವೀಟ್ ಮಾಡಿದ್ದು, ತಾವು ಕೊರೋನಾ ಸೋಂಕಿಗೆ ತುತ್ತಾಗಿದ್ದು, ಕಳೆದ 10 ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.
ತಾವು ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಕೋವಿಡ್ ಪರೀಕ್ಷೆ ನಡೆಸಿದಾಗ ಸೋಂಕಿರುವುದು ಪತ್ತೆಯಾಗಿತ್ತು. ಪ್ರಸ್ತುತ ತಾವು ಹೃಷಿಕೇಶದಲ್ಲಿದ್ದು, ಇಲ್ಲಿನ ವಂದೇ ಮಾತರಂ ಕುಂಜ್ ನಲ್ಲಿ ಸ್ವಯಂ ಕ್ವಾರಂಟೈನ್ ಆಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ಕು ದಿನಗಳ ಬಳಿಕ ಮತ್ತೆ ಟೆಸ್ಟ್ ಗೆ ಒಳಪಡುತ್ತೇನೆ. ಕಳೆದ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.
0 comments:
Post a Comment