ಎಚ್.ಡಿ.ಕೆ. ಹೇಳಿಕೆಯನ್ನು ವ್ಯಂಗ್ಯ ಮಾಡಿದ ಡಿಸಿಎಂ ಲಕ್ಷ್ಮಣ್ ಸವದಿಗೆ ಸಾರಾ ಮಹೇಶ್ ಟಾಂಗ್
ಬೆಂಗಳೂರು, ಸೆ. 11, 2020 (ಕರಾವಳಿ ಟೈಮ್ಸ್) : ಡ್ರಗ್ಸ್ ದಂಧೆಕೋರರೇ ಸರಕಾರ ಬೀಳಿಸಿದರು ಎಂದು ಡ್ರಗ್ಸ್ ದಂಧೆಯ ಗಂಭೀರತೆ ಕುರಿತು ಮಾಜಿ ಸಿ ಎಂ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಯಿಸಿದ್ದ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಇದೀಗ ಟ್ವಿಟರ್ ಮೂಲಕ ಮಾಜಿ ಸಚಿವ ಸಾರಾ ಮಹೇಶ್ ಅವರು ಟಾಂಗ್ ನೀಡಿದ್ದಾರೆ. ಈ ಮೂಲಕ ಡ್ರಗ್ಸ್ ವಿಚಾರ ಇದೀಗ ಸಂಪೂರ್ಣ ರಾಜಕೀಕರಣಗೊಳ್ಳುತ್ತಿದ್ದು, ರಾಜಕೀಯ ನಾಯಕರು ಪರಸ್ಪರ ಕೆಸರೆರಚಾಟ ನಡೆಸುತ್ತಿರುವ ಬೆಳವಣಿಗೆ ನಡೆಯುತ್ತಿದೆ.
ಡಿಸಿಎಂ ಲಕ್ಷ್ಮಣ ಸವದಿ ಅವರ ಪ್ರತಿಕ್ರಿಯೆಗೆ ತೀಕ್ಷ್ಣವಾಗಿ ತಿರುಗೇಟು ನೀಡಿರುವ ಮಾಜಿ ಸಚಿವ ಸಾರಾ ಮಹೇಶ್ ಈ ಬಗ್ಗೆ ಟ್ವೀಟ್ ಮಾಡಿದ್ದು, “ಡ್ರಗ್ಸ್ ದಂಧೆಕೋರರೇ ಸರಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್‍ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲಂ ನೋಡುವ ಅಡಿಕ್ಷನ್ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯವಸನವೇ. ಡ್ರಗ್ಸ್ ಆದರೂ, ಬ್ಲ್ಯೂ ಫಿಲಂ ಆದರೂ?” ಎಂದು ಟಾಂಗ್ ನೀಡಿದ್ದಾರೆ.
ಡ್ರಗ್ಸ್ ದಂಧೆಕೋರರು ಸರಕಾರ ಬೀಳಿಸಿದರು ಎಂದು ಈ ಹಿಂದೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ ಕುರಿತು ಡಿಸಿಎಂ ಲಕ್ಷ್ಮಣ್ ಸವದಿ ಪ್ರತಿಕ್ರಿಯಿಸಿ, ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಾಸ್ಪದ ಎಂದಿದ್ದರು.
ಡ್ರಗ್ಸ್ ಮಾಫಿಯಾ ಬಗ್ಗೆ ಮೊದಲು ಧ್ವನಿ ಎತ್ತಿದ್ದೇ ಕುಮಾರಸ್ವಾಮಿ, ಈ ಜಾಲದಲ್ಲಿ ಸಿಕ್ಕಿ ಬೀಳುತ್ತಿರುವವರು ಬಿಜೆಪಿಯವರು. ಕೃಷಿ ಸಚಿವ ಬಿ.ಸಿ. ಪಾಟೀಲ್ ಕೂಡ ಬಾಲ ಸುಟ್ಟ ಬೆಕ್ಕಿನಂತೆ ಆಡುತ್ತಿದ್ದಾರೆ ಎಂದು ಸಾರಾ ಮಹೇಶ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
0 comments:
Post a Comment