ವಿಟ್ಲ : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಎಗರಿಸಿದ ಅಪರಿಚಿತ - Karavali Times ವಿಟ್ಲ : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಎಗರಿಸಿದ ಅಪರಿಚಿತ - Karavali Times

728x90

22 September 2020

ವಿಟ್ಲ : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಎಗರಿಸಿದ ಅಪರಿಚಿತ



ವಿಟ್ಲ, ಸೆ. 22, 2020 (ಕರಾವಳಿ ಟೈಮ್ಸ್) : ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಮಹಿಳೆಯೋರ್ವರ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಎಗರಿಸಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲಮುಡ್ನೂರು ಗ್ರಾಮದ ಕುಂಡಡ್ಕ-ಮರುವಾಳ ಎಂಬಲ್ಲಿ ಮಂಗಳವಾರ ನಡೆದಿದೆ. 

ಇಲ್ಲಿನ ನಿವಾಸಿ ಎಲಿಜ್ ಮಿನೆಜಸ್ (58) ಎಂಬವರು ಮಂಗಳವಾರ ಬೆಳಿಗ್ಗೆ ಸುಮಾರು 11.15 ರ ವೇಳೆಗೆ ಬೀಡಿ ಬ್ರಾಂಚ್‍ನಿಂದ ವಾಪಾಸ್ಸು ಬರುತ್ತಿದ್ದ ವೇಳೆ ಕುಂಡಡ್ಕ ಕಡೆಯಿಂದ ಕೆಎ21 ಇಎ7284 ನೋಂದಣಿ ಸಂಖ್ಯೆಯ ದ್ಚಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 4 ಪವನ ತೂಕದ ಚಿನ್ನದ ಕರಿಮಣಿ ಸರವನ್ನು ಬಲಾತ್ಕಾರವಾಗಿ ಎಳೆದುಕೊಂಡು ಪರಾರಿಯಾಗಿರುತ್ತಾನೆ. ಚಿನ್ನದ ಸರದ ಒಟ್ಟು ಮೌಲ್ಯ 1,30,000/- ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಕಲಂ : 392 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. 










  • Blogger Comments
  • Facebook Comments

0 comments:

Post a Comment

Item Reviewed: ವಿಟ್ಲ : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಎಗರಿಸಿದ ಅಪರಿಚಿತ Rating: 5 Reviewed By: karavali Times
Scroll to Top