ಬಂಟ್ವಾಳ, ಸೆ. 25, 2020 (ಕರಾವಳಿ ಟೈಮ್ಸ್) : ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಚೆನ್ನಬಸಪ್ಪ ಅಂಗಡಿ ಹಾಗೂ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ನಾರಾಯಣ ರಾವ್ ಅವರ ನಿಧನಕ್ಕೆ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇಬ್ಬರು ರಾಜಕೀಯ ಧುರೀಣರ ಅಕಾಲಿಕ ಸಾವು ಅತ್ಯಂತ ನೋವನ್ನುಂಟು ಮಾಡಿದ್ದು, ಇವರುಗಳ ಅಗಲಿಕೆ ರಾಜ್ಯದ ಜನತೆಗೆ ತುಂಬಲಾರದ ನಷ್ಟವಾಗಿರುತ್ತದೆ. ಇವರುಗಳ ಅಕಾಲಿಕ ಅಗಲುವಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ಇವರುಗಳ ಕುಟುಂಬಗಳಿಗೆ ಕರುಣಿಸಲಿ ಎಂದು ಶಾಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment