ಬಂಟ್ವಾಳ (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಇದರ ವಿಶೇಷ ಸಭೆಯು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಜಯಂತಿ ವಿ. ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಹಾಗೂ ಮುಂದಿನ ಪಂಚಾಯತ್ ಚುನಾವಣೆಗೆ ತಯಾರಿಯ ಬಗ್ಗೆ ಮಾಹಿತಿ ಹಾಗೂ ಸಲಹೆ ನೀಡಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಶಾಲೇಟ್ ಪಿಂಟೋ ಭಾಗವಹಿಸಿದ್ದರು.
ಇದೇ ವೇಳೆ ಸಿಇಟಿ ಪರೀಕ್ಷೆಯಲ್ಲಿ 697 ರ್ಯಾಂಕ್ ಪಡೆದ ವಿಡ್ಲಪಡ್ನೂರು ವಲಯ ಕಾಂಗ್ರೆಸ್ ಅದ್ಯಕ್ಷ ಸಂದೇಶ್ ಶೆಟ್ಟಿ ಬಿಕ್ನಾಜೆ-ಭಾರತಿ ಎಸ್ ಶೆಟ್ಟಿ ದಂಪತಿಯ ಪುತ್ರ ಸಮರ್ಥ್ ಕುಮಾರ್ ಶೆಟ್ಟಿ ಅವರನ್ನು ಮಾಜಿ ಸಚಿವ ಬಿ. ರಮನಾಥ ರೈ ಸನ್ಮಾನಿಸಿದರು.
ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಉಸ್ತುವಾರಿ ಚಂದ್ರಕಲಾ ಡಿ ರಾವ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಾಸ್ಮಿನ್ ಡಿ’ಸೋಜ, ಬಂಟ್ವಾಳ ತಾ.ಪಂ. ಸ್ಥಾಯಿ ಸಮಿತಿ ಅದ್ಯಕ್ಷೆ ಮಲ್ಲಿಕಾ ಶೆಟ್ಟಿ, ಡಿಸಿಸಿ ಮಹಿಳಾ ಸದಸ್ಯೆ ಮಲ್ಲಿಕಾ ಪಕ್ಕಳ, ಜಿ.ಪಂ. ಸದಸ್ಯೆ ಮಂಜುಳಾ ಮಾವೆ, ಪುರಸಭೆ, ತಾ.ಪಂ, ಗ್ರಾ.ಪಂ ಸದಸ್ಯರು, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ವಲಯ ಮಹಿಳಾ ಕಾಂಗ್ರೆಸ್ ಅದ್ಯಕ್ಷರು ಭಾಗವಹಿಸಿದ್ದರು.
0 comments:
Post a Comment