ಬೆಂಗಳೂರು (ಕರಾವಳಿ ಟೈಮ್ಸ್) : ಕಾರ್ಮಿಕ ಮತ್ತು ಸಕ್ಕರೆ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಅವರ ಪತ್ನಿ ವನಜಾಕ್ಷಿ ಹೆಬ್ಬಾರ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಸ್ವತಃ ಸಚಿವರೇ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದ್ದು, ಅವರಿಗೆ ಹಾಗೂ ಅವರ ಪತ್ನಿಗೆ ಕೋವಿಡ್ ಪಾಸಿಟಿವ್ ಬಗ್ಗೆ ದೃಢಪಡಿಸಿದ್ದಾರೆ. ಶುಕ್ರವಾರ ಯಲ್ಲಾಪುರ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಸಚಿವರಿಗೆ ಇಂದು ವರದಿ ಬಂದಿದ್ದು, ಇಬ್ಬರಿಗೂ ಸೋಂಕು ದೃಢಪಟ್ಟಿದೆ. ಕಳೆದ 2 ದಿನಗಳಿಂದ ಸಚಿವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವರು ಫೇಸ್ಬುಕ್ ಮೂಲಕ ವಿನಂತಿಸಿದ್ದಾರೆ.
ಈ ಕುರಿತು ಬರೆದುಕೊಂಡಿರುವ ಅವರು, ಇಂದು ನಾನು ನನ್ನ ಧರ್ಮಪತ್ನಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿಯಲ್ಲಿ ಇಬ್ಬರಿಗೂ ಪಾಸಿಟಿವ್ ಬಂದಿದೆ. ಯಾವುದೇ ಹೆಚ್ಚಿನ ರೋಗ ಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೈನ್‍ನಲ್ಲಿದ್ದು, ಚಿಕಿತ್ಸೆ ತೆಗೆದುಕೊಳ್ಳುತ್ತೇನೆ. ನಿಮ್ಮೆಲ್ಲರ ಆಶೀರ್ವಾದ, ಹಾರೈಕೆಯಿಂದ ಅತೀ ಶೀಘ್ರ ಗುಣಮುಖವಾಗಿ ಜನತೆಯ ಸೇವೆಯ ಕಾರ್ಯದಲ್ಲಿ ತೊಡಗಿಕೊಳ್ಳುವ ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ.
ಸಚಿವರು ಇಂದು ಶಿರಸಿ, ಸಿದ್ದಾಪುರ ಭಾಗದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ ಕೋವಿಡ್ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರ ಎಲ್ಲ ಕಾರ್ಯಕ್ರಮಗಳು ರದ್ದಾಗಿದ್ದು. ಹೋಂ ಕ್ವಾರಂಟೈನ್‍ನಲ್ಲಿದ್ದಾರೆ.
0 comments:
Post a Comment