ಬೆಂಗಳೂರು, ಸೆ. 26, 2020 (ಕರಾವಳಿ ಟೈಮ್ಸ್) : ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಮತ್ತೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆ. 28 ಹಾಗೂ 29ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 64.5 ರಿಂದ 115.5 ಮಿ.ಮೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದಲ್ಲದೆ ಬೀದರ್, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಮಳೆ ಎಚ್ಚರಿಕೆ ನೀಡಲಾಗಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ನೈರುತ್ಯ ಮುಂಗಾರು ಚುರುಕಾಗಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಳೆ ತಗ್ಗಿದ್ದು, ಶಿವಮೊಗ್ಗ, ಮೈಸೂರು, ಮಂಡ್ಯ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ಸೂಚಿಸಿದೆ.
0 comments:
Post a Comment