ಬೆಂಗಳೂರು, ಅ. 09, 2020 (ಕರಾವಳಿ ಟೈಮ್ಸ್) : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದ್ದು ಶೇ. 41.28 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 2,12,678 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆದಿದ್ದು, ಈ ಪೈಕಿ 87,784 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಸೆಪ್ಟೆಂಬರ್ 7 ರಿಂದ 19ರವರೆಗೆ ಒಟ್ಟು 305 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು www.karresults.nic.in ವೆಬ್‍ಸೈಟ್‍ಗೆ ಭೇಟಿ ನೀಡಬಹುದು. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ.45ರಷ್ಟು ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದರೆ ಶೇ. 38.30ರಷ್ಟು ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ.
ಜ್ಞಾನ ವಿಭಾಗದಲ್ಲಿ ಶೇ. 37.45, ವಾಣಿಜ್ಯ ವಿಭಾಗದಲ್ಲಿ ಶೇ. 39.02 ಹಾಗೂ ಕಲಾ ವಿಭಾಗದಲ್ಲಿ ಶೇ. 45.14 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕನ್ನಡ ಮಾದ್ಯಮದಲ್ಲಿ ವ್ಯಾಸಂಗ ಮಾಡಿದ್ದ ಶೇ. 45.41 ಹಾಗೂ ಆಂಗ್ಲ ಮಾದ್ಯಮದಲ್ಲಿ ವ್ಯಾಸಂಗ ಮಾಡಿದ್ದ ಶೇ. 35.89 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
0 comments:
Post a Comment