ಬಂಟ್ವಾಳ, ಅ. 11, 2020 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಣಿ ಮಹಾಶಕ್ತಿ ಕೇಂದ್ರದ ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಕುಟುಂಬ ಮಿಲನ ಕಾರ್ಯಕ್ರಮ ಬದಿಗುಡ್ಡೆಯಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಮಾತನಾಡಿ, ಪಂಚಾಯತ್‍ಗೆ ಕೇಂದ್ರದ ಮೋದಿ ಸರಕಾರ 14 ಮತ್ತು 15ನೇ ಹಣಕಾಸು ಯೋಜನೆಯಡಿ ನೇರ ಅನುದಾನ ನೀಡುವ ಮೂಲಕ ಗ್ರಾಮೀಣಾಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. ಮಾಣಿ ಗ್ರಾಮಕ್ಕೆ ಶಾಸಕನಾಗಿ 2 ವರ್ಷದಲ್ಲಿ 2 ಕೋಟಿ ಅನುದಾನ ಒದಗಿಸಿ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯಿತ್ತಿದ್ದು, ಮಾಣಿ ಗ್ರಾಮದಲ್ಲಿ ಕೇಂದ್ರ ಸರಕಾರದ ಕೃಷಿ ಸಮ್ಮಾನ್ ಯೋಜನೆಯಡಿ 416 ಫಲಾನುಭವಿಗಳಿಗೆ ವಾರ್ಷಿಕ ತಲಾ 10,000/- ದಂತೆ ಸಹಾಯಧನ ಪಡೆಯುತ್ತಿದ್ದಾರೆ. ಇತ್ತೀಚೆಗೆ ನಡೆದ ಆಯುಷ್ಮಾನ್ ಕಾರ್ಡ್ ಅಭಿಯಾನದಲ್ಲಿ 1,200 ಜನರಿಗೆ ಉಚಿತ ಕಾರ್ಡ್ ವಿತರಿಸಲಾಗಿದೆ. ಮುಂದಿನ ಪಂಚಾಯತ್ ಚುನಾವಣೆಯಲ್ಲಿ ಮಾಣಿಯಲ್ಲಿ ಮತ್ತೊಮ್ಮೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ರಾಜಕಾರಣವನ್ನು ಬೆಂಬಲಿಸುವಂತೆ ಕರೆ ನೀಡಿದರು.
ಈ ಸಂದರ್ಭ ಮಾಜಿ ಶಾಸಕ ಕೆ ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಒಳಚರಂಡಿ ಮತ್ತು ನೀರು ಸರಬರಾಜು ಮಂಡಳಿಯ ನಿರ್ದೇಶಕಿ ಸುಲೋಚನ ಜಿ.ಕೆ ಭಟ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ವಿಟ್ಲಪಡ್ನೂರು, ಡೊಂಬಯ ಅರಳ, ಪ್ರಮುಖರಾದ ಗಣೇಶ್ ರೈ ಮಾಣಿ, ಪುಷ್ಪರಾಜ್ ಚೌಟ, ನಾರಾಯಣ ಶೆಟ್ಟಿ, ಹರೀಶ್ ಕುಲಾಲ್, ನಾರಾಯಣ ಭಟ್, ಮಹಾಬಲ ಚೌಟ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment